ಬ್ರೇಕಿಂಗ್ ನ್ಯೂಸ್‌ | ‘ಬುಲ್ಡೋಜರ್ ನ್ಯಾಯ’ ನಿಷೇಧ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು; ಯೋಗಿ ಸರ್ಕಾರಕ್ಕೆ ತರಾಟೆ

Date:

Advertisements

ಆರೋಪಿಗಳಾಗಲಿ, ತಪ್ಪಿತಸ್ಥರಾಗಿರಲಿ ಯಾರದ್ದೇ ಮನೆಗಳು, ಆಸ್ತಿಗಳನ್ನು ನೆಲಸಮ ಮಾಡಬಾರದು. ಬುಲ್ಡೋಜರ್ ಕಾರ್ಯಾಚರಣೆ ಸ್ವೀಕಾರಾರ್ಹವಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದು, ‘ಬುಲ್ಡೋಜರ್ ಕ್ರಮ’ವನ್ನು ನಿಷೇಧಿಸಿ ಮಹತ್ವದ ತೀರ್ಪು ನೀಡಿದೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವನ್ನು ಮತ್ತೆ ತರಾಟೆಗೆ ತೆಗೆದುಕೊಂಡಿದೆ.

‘ಬುಲ್ಡೋಜರ್ ನ್ಯಾಯ’ ಎಂಬ ಹೆಸರಿನಲ್ಲಿ ಉತ್ತರ ಪ್ರದೇಶ ಸರ್ಕಾರವು ಅಪರಾಧಿಗಳು, ಆರೋಪಿಗಳ ಮನೆ-ಆಸ್ತಿಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆ ಆರಂಭಿಸಿತ್ತು. ಬಳಿಕ, ಇದು ದೇಶಾದ್ಯಂತ ಪಸರಿಸಿತ್ತು. ಬುಲ್ಡೋಜರ್ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಯೂ ಸಲ್ಲಿಕೆಯಾಗಿತ್ತು. ಈ ಹಿಂದೆ, ಬುಲ್ಡೋಜರ್ ನ್ಯಾಯವನ್ನು ಅನುಮೋದಿಸಲಾಗದು, ಯಾವುದೇ ಕಟ್ಟಡಗಳನ್ನು ಅಧಿಕಾರಿಗಳು ಕೆಡವಬೇಕೆಂದರೆ, ನ್ಯಾಯಾಲಯದ ಅನುಮತಿ ಪಡೆಯಬೇಕೆಂದು ಸುಪ್ರೀಂ ಕೋರ್ಟ್ ಈ ಹಿಂದೆ ಮಧ್ಯಂತರ ಆದೇಶ ನೀಡಿತ್ತು.

ಬುಧವಾರ, ಅಂತಿಮ ಆದೇಶ ನೀಡಿರುವ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠವು, ‘ಬುಲ್ಡೋಜರ್ ನ್ಯಾಯ’ ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. ಬುಲ್ದೋಜರ್ ಕ್ರಮವನ್ನು ನಿಷೇಧಿಸಿದೆ.

Advertisements

ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳಾಗಿರುವವರ ಒಡೆತನದ ಆಸ್ತಿಗಳನ್ನು ನೆಲಸಮಗೊಳಿಸುವ ಕಾರ್ಯಾಚರಣೆಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ವಿವಿಧ ರಾಜ್ಯ ಸರ್ಕಾರಗಳು ಹಲವಾರು ಅರ್ಜಿಗಳನ್ನು ಸಲ್ಲಿಸಿದ್ದವು. ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಬುಲ್ಡೋಜರ್ ನ್ಯಾಯ ಅಸ್ತಿತ್ವದಲ್ಲಿದೆ. ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಇಂತಹ ಕ್ರಮವನ್ನು ಜರುಗಿಸುತ್ತಿದೆ ಎಂದು ಆರೋಪಿಸಲಾಗಿತ್ತು.

ಉತ್ತರ ಪ್ರದೇಶ, ಮಧ್ಯಪ್ರದೇಶ, ದೆಹಲಿ ಮತ್ತು ಗುಜರಾತ್ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಾನೂನು ಪ್ರಕ್ರಿಯೆಯನ್ನು ಅನುಸರಿಸದೆ ಜನರ ಆಸ್ತಿಗಳನ್ನು ನೆಲಸಮ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು.

ಈ ವಿಷಯವನ್ನು ಗಮನಿಸಿದ ಸುಪ್ರೀಂ ಕೋರ್ಟ್, ”ಕ್ರಿಮಿನಲ್ ಪ್ರಕರಣದ ಆರೋಪಿಯ ಒಡೆತನದಲ್ಲಿದೆ ಎಂಬ ಕಾರಣಕ್ಕಾಗಿ ಮನೆಯನ್ನು ಹೇಗೆ ನೆಲಸಮ ಮಾಡಬಹುದು. ಓರ್ವ ಎಸಗಿದ ತಪ್ಪಿಗೆ ಇಡೀ ಕುಟುಂಬಕ್ಕೆ ಶಿಕ್ಷೆ ಕೊಡುವುದು ನ್ಯಾಯವಲ್ಲ” ಎಂದು ಹೇಳಿದೆ.

ಈ ವರದಿ ಓದಿದ್ದೀರಾ?: ಬುಲ್ಡೋಜರ್ ನ್ಯಾಯ | ಭಾರತವನ್ನು ಆಕ್ರಮಿಸಿಕೊಂಡಿದ್ದು ಹೇಗೆ ಮತ್ತು ಏಕೆ?

ಯಾವುದೇ ಕಟ್ಟಡವು ಅಕ್ರಮವಾಗಿ ನಿರ್ಮಾಣವಾಗಿದ್ದರೆ, ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದರೆ ಮಾತ್ರವೇ ನೆಲಸಮ ಮಾಡಬಹುದು. ಅದಲ್ಲದೆ, ಬೇರೆ ಯಾವುದೇ ಕಾರಣಕ್ಕೂ ‘ಬುಲ್ಡೋಜರ್ ನ್ಯಾಯ’ದ ಹೆಸರಿನಲ್ಲಿ ಯಾವುದೇ ಕಟ್ಟಡವನ್ನು ನೆಲಸಮ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X