ಬಿಜೆಪಿ ಸರ್ಕಾರದ ಕೋವಿಡ್‌ ಅಕ್ರಮ ಬಗ್ಗೆ ಪ್ರಧಾನಿ ಮೋದಿ ತುಟಿ ಬಿಚ್ಚಲಿ: ಸಿಎಂ ಸಿದ್ದರಾಮಯ್ಯ ಆಗ್ರಹ

Date:

Advertisements

ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್‌ನ್ನು 2,140 ರೂ.ಗೆ ಖರೀದಿ ಮಾಡಿದ್ದಾರೆ. ಭ್ರಷ್ಟಾಚಾರ ಮಾಡಿರುವುದು ಅವರ ಸರ್ಕಾರ. ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಮೈಸೂರಿನಲ್ಲಿ ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಅವರು ಪ್ರಧಾನ ಮಂತ್ರಿ ಸ್ಥಾನ ಬಿಡಲು ಸಿದ್ಧರಿದ್ದಾರೆಯೇ” ಎಂದು ಸವಾಲು ಹಾಕಿದರು.

ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಕರ್ನಾಟಕವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಕರ್ನಾಟಕ ದೊಡ್ಡ ರಾಜ್ಯವಾಗಿದ್ದು, ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆದಿರುವುದರಿಂದ, ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಪ್ರಧಾನಿಯವರು ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ” ಎಂದರು.

Advertisements

“ಬಂಡೀಪುರದಲ್ಲಿ ರಾತ್ರಿ ಸಂಚಾರ ಪ್ರಾರಂಭಿಸುವ ಬಗ್ಗೆ ಪ್ರಸ್ತಾವನೆ ಇಲ್ಲ. ಬಂಡೀಪುರದಲ್ಲಿ ರಾತ್ರಿ ಸಂಚಾರ ಪುನಃ ಪ್ರಾರಂಭಿಸುವ ಬಗ್ಗೆ ಚರ್ಚೆಯಾಗಿಲ್ಲ. ಸರ್ಕಾರದ ಮುಂದೆ ಈ ಕುರಿತ ಪ್ರಸ್ತಾವನೆ ಇಲ್ಲ. ಮಾಜಿ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಪುನಃ ಸೇರ್ಪಡೆ ಮಾಡಿಕೊಳ್ಳುವ ವಿಚಾರ ಚುನಾವಣೆ ಮುಗಿದ ಮೇಲೆ ಪರಿಶೀಲನೆ ಮಾಡೋಣ” ಎಂದು ಹೇಳಿದರು.

ಸುಳ್ಳು ಆರೋಪಗಳ ಮೇಲೆ ಇ.ಡಿ ತನಿಖೆ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ತನಿಖೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, “ಇ.ಡಿಯವರು ಕಾನೂನು ಪ್ರಕಾರ ಮಾಡುವ ತನಿಖೆ ನಡೆಸಲಿ, ಅದಕ್ಕೆ ಯಾವುದೇ ರೀತಿಯ ಪ್ರತಿರೋಧವನ್ನು ನಾವು ಒಡ್ಡುವುದಿಲ್ಲ. ಇ.ಡಿ ತನಿಖೆ ನಿಷ್ಪಪಕ್ಷಪಾತವಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಸುಳ್ಳು ಆರೋಪಗಳ ಮೇಲೆ ತನಿಖೆ ನಡೆಯುತ್ತಿದೆ ಎಂಬುದಷ್ಟೇ ಹೇಳಬಲ್ಲೇ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾರ್ವಜನಿಕ ಸಂಯಮವೂ, ಸುದ್ದಿ ಮಾಧ್ಯಮಗಳೂ

‘ಸಿದ್ದರಾಮಯ್ಯನ ಸೊಕ್ಕು ಮುರಿಯುತ್ತೇವೆ’ ಎಂದಿರುವುದು ಸರಿಯೇ?

“ಮಾಜಿ ಪ್ರಧಾನಿ ದೇವೇಗೌಡರು ‘ಸಿದ್ದರಾಮಯ್ಯನ ಸೊಕ್ಕು ಮುರಿಯುತ್ತೇವೆ’ ಎಂದಿರುವುದು ಎಷ್ಟರ ಮಟ್ಟಿಗೆ ಸರಿ ? ಓರ್ವ ಮುಖ್ಯಮಂತ್ರಿಗೆ ಈ ರೀತಿ ಹೇಳುವುದು ಸರಿಯೇ? ಜಮೀರ್ ಅಹ್ಮದ್ ಹಾಗೂ ಕುಮಾರಸ್ವಾಮಿಯವರು ಒಂದು ಕಾಲದಲ್ಲಿ ಆಪ್ತರಾಗಿದ್ದರು. ಆದರೆ ಪ್ರಸ್ತುತ ಅವರ ನಡುವಿನ ಸಂಬಂಧ ಹೇಗಿದೆ ಎಂಬ ಬಗ್ಗೆ ನನಗೆ ತಿಳಿದಿಲ್ಲ” ಎಂದರು.

ಬಿಜೆಪಿಗೆ ಕೋಮುಗಳ ನಡುವೆ ಬೆಂಕಿ ಹಚ್ಚುವುದೇ ಕೆಲಸ

ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಬಗ್ಗೆ ಹಾಗೂ ಈ ಬಗ್ಗೆ ಬಿಜೆಪಿ ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಿರುವಂತೆ ಮುಸ್ಲಿಮರಿಗೂ ಮೀಸಲಾತಿ ನೀಡಿ ಎಂದು ಬೇಡಿಕೆಯಿಟ್ಟಿದ್ದಾರೆ. ಆದರೆ ಈ ಬಗ್ಗೆ ಯಾವುದೇ ತೀರ್ಮಾನ ಸರ್ಕಾರ ತೆಗೆದುಕೊಂಡಿಲ್ಲ. ಬಿಜೆಪಿಯವರಿಗೆ ಕೋಮುವಾದವನ್ನು ಸೃಷ್ಟಿಸುವುದೇ ಕಾಯಕವಾಗಿದೆ. ಕೋಮುಗಳ ನಡುವೆ ಬೆಂಕಿ ಹಚ್ಚುವ ಕೆಲಸದಲ್ಲಿ ಅವರು ನಿರತರಾಗಿದ್ದಾರೆ. ಬಿಜೆಪಿಯವರೆಂದೂ ಸಮಾಜದಲ್ಲಿ ಶಾಂತಿ, ಸೋದರತ್ವ ನೆಲೆಸಬೇಕೆಂದು ಬಯಸಿದವರೇ ಅಲ್ಲ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X