ಕಾನೂನಿನ ಅಜ್ಞಾನಕ್ಕೆ ಕ್ಷಮೆಯಿಲ್ಲ, ಕಾನೂನು ಜ್ಞಾನ ಎಲ್ಲರಿಗೂ ಅತ್ಯಗತ್ಯವಾಗಿದೆ. ಕಾನೂನು ಸೇವಾ ಪ್ರಾಧಿಕಾರ ಎಂದರೆ, ಪ್ರತಿಯೊಬ್ಬರಿಗೂ ಎಲ್ಲ ರೀತಿಯ ಉಚಿತ ಕಾನೂನಿನ ನೆರವು ಮತ್ತು ಅರಿವನ್ನು ನೀಡುವಂತದ್ದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದರು.
ಕೊಡಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಂಯುಕ್ತಾಶ್ರಯದಲ್ಲಿ ಮಡಿಕೇರಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.
“ಲೋಕ ಅದಾಲತ್ ಮೂಲಕ ರಾಜಿ ಸಂಧಾನ ಏರ್ಪಡಿಸಿ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಉದ್ದೇಶವಾಗಿದೆ. ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಬೇಕು. ಜತೆಗೆ ಮಾನವೀಯ ಮೌಲ್ಯ ರೂಢಿಸಿಕೊಳ್ಳುವುದು ಅತಿಮುಖ್ಯವಾಗಿದೆ” ಎಂದು ಕಿವಿಮಾತು ಹೇಳಿದರು.
ಈ ಸುದ್ದಿ ಓದಿದ್ದೀರಾ? ಹಾಸನ | ಹಂದಿಜೋಗಿ ಕಾಲೋನಿಗೆ ಅಂಬೇಡ್ಕರ್ ಭವನ ನಿರ್ಮಾಣ; ಭೂಮಿ ಮಂಜೂರು ಮಾಡುವಂತೆ ಸಿಜಿಎಂ ಆಗ್ರಹ
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲೆ ಡಾ ಡಿ ಕೆ ಸರಸ್ವತಿ ಮಾತನಾಡಿ, “ನಾವುಗಳು ಶಿಸ್ತುಬದ್ಧ ಜೀವನ ನಡೆಸಿ, ಇನ್ನೊಬ್ಬರಿಗೆ ತೊಂದರೆಯಾಗದಂತೆ ಬದುಕಬೇಕು. ಸಮಾಜದಲ್ಲಿ ಎಲ್ಲರ ಮೇಲೆ ಗೌರವದಿಂದ ನಡೆದುಕೊಳ್ಳುವ ಗುಣ ನಮ್ಮಲ್ಲಿರಬೇಕು. ನಾವುಗಳು ಪ್ರಾಣಿಗಳಂತೆ ವರ್ತಿಸದೆ ಮನುಷ್ಯನ ಮೌಲ್ಯಯುತ ಗುಣಗಳನ್ನು ಅಳವಡಿಸಿಕೊಂಡು
ಕಾನೂನಾತ್ಮಕ ರೀತಿಯ ನಿಯಮದಲ್ಲಿ ಬದುಕಬೇಕು” ಎಂದು ಸಲಹೆ ನೀಡಿದರು.
ಉಪನ್ಯಾಸಕರಾದ ಸತೀಶ್, ನಮಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಬಿ ಎಸ್ ಜಯಪ್ಪ, ನಿರ್ಮಲ,
ಪ್ರಿಯ, ಭೂಮಿಕಾ ಹಾಗೂ ವಿದ್ಯಾರ್ಥಿಗಳು ಇದ್ದರು.