ಚಿಕ್ಕಬಳ್ಳಾಪುರ | ಪರಿಹಾರ ವಿಳಂಬ; ಎಸಿ ಕಚೇರಿಯ ಪೀಠೋಪಕರಣಗಳನ್ನೇ ಹೊತ್ತೊಯ್ದ ಸಂತ್ರಸ್ತರು

Date:

Advertisements

ಸರಿಯಾದ ಪರಿಹಾರ ನೀಡದ, ನ್ಯಾಯಾಲಯದ ಆದೇಶವನ್ನು ನಿರ್ಲಕ್ಷಿಸಿದ್ದ ಉಪ ವಿಭಾಗಾಧಿಕಾರಿ (ಎಸಿ) ಕಚೇರಿಯ ಪೀಠೋಪಕರಣಗಳನ್ನು ದೂರುದಾರರು ಹೊತ್ತೊಯ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ದೂರುದಾರರು ತಮ್ಮ ಕಚೇರಿಯ ಎಲ್ಲ ವಸ್ತುಗಳನ್ನು ಹೊತ್ತೊಯ್ಯುತ್ತಿದ್ದಾಗ ಉಪ ವಿಭಾಗಾಧಿಕಾರಿ ಮೂಕರಾಗಿ ನಿಂತಿದ್ದದ್ದು ಕಂಡುಬಂದಿದೆ.

2011ರಲ್ಲಿ ಬಾಗೇಪಲ್ಲಿಯ ಡಿವಿಜಿ ರಸ್ತೆ ಅಗಲೀಕರಣ ಕಾಮಗಾರಿ ನಡೆದಿತ್ತು. ಆಗ, ಬೀದಿ ಬದಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದವರನ್ನು ಒಕ್ಕಲೆಬ್ಬಿಸಲಾಗಿತ್ತು. ಜಾಗ ಕಳೆದುಕೊಂಡವರಿಗೆ ಒಂದು ಚದುರ ಅಡಿಗೆ ಕೇವಲ 240 ರೂ.ಗಳಂತೆ ಪರಿಹಾರ ನೀಡಲಾಗಿತ್ತು.

ಆ ಪರಿಹಾರದ ಮೊತ್ತವು ತೀರ ಕಡಿಮೆ. ಹೆಚ್ಚು ಪರಿಹಾರ ನೀಡಬೇಕೆಂದು ಜಾಗ ಕಳೆದುಕೊಂಡಿದ್ದವರು ಚಿಕ್ಕಬಳ್ಳಾಪುರ ಸೆಷನ್ಸ್‌ ಕೋರ್ಟ್‌ ಮೆಟ್ಟಿಲೇರಿದ್ದರು. ಅವರ ಅಳಲು ಆಲಿಸಿದ್ದ ನ್ಯಾಯಾಲಯ, ಪ್ರತಿ ಚದುರ ಅಡಿಗೆ 890 ರೂ.ಗಳಂತೆ ಪರಿಹಾರ ಪಾವತಿಸಬೇಕೆಂದು ಕಳೆದ ಎರಡು ತಿಂಗಳ ಹಿಂದೆ ಆದೇಶಿಸಿತ್ತು. ಪರಿಹಾರ ಪಾವತಿಸಲು ಉಪ ವಿಭಾಗಾಧಿಕಾರಿ ಅಶ್ವಿನ್ ಅವರಿಗೆ ಸೂಚನೆ ನೀಡಿತ್ತು.

Advertisements

ಕೋರ್ಟ್ ತೀರ್ಪು ನೀಡಿ ಎರಡು ತಿಂಗಳು ಕಳೆದರೂ, ಉಪ ವಿಭಾಗಾಧಿಕಾರಿ ಅಶ್ಚಿನ್ ಅವರು ಪರಿಹಾರ ಪಾವತಿ ಮಾಡಿರಲಿಲ್ಲ. ಹೀಗಾಗಿ, ದೂರುದಾರರು ಮತ್ತೆ ಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸಿರುವ ಕೋರ್ಟ್‌, ಉಪ ವಿಭಾಗಾಧಿಕಾರಿ ಕಚೇರಿಯ ಚರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ದೂರುದಾರರಿಗೆ ನಿರ್ದೇಶಿಸಿತ್ತು.

ನ್ಯಾಯಾಲಯದ ನಿರ್ದೇಶನದಂತೆ ದೂರುದಾರರು ಎಸಿ ಕಚೇರಿಯಲ್ಲಿದ್ದ ಪೀಠೋಪಕರಣಗಳು, ಕಂಪ್ಯೂಟರ್, ಟೇಬಲ್, ಪ್ರಿಂಟರ್, ಗಾಡ್ರೆಜ್, ಖುರ್ಚಿಗಳು ಸೇರಿದಂತೆ ಎಲ್ಲ ವಸ್ತುಗಳನ್ನು ಹೊತ್ತೋಯ್ದಿದ್ದಾರೆ.

ಬಳಿಕ, ಉಪವಿಭಾಗಾಧಿಕಾರಿಯು ಪರಿಹಾರ ಪಾವತಿಗೆ ಎರಡು ತಿಂಗಳ ಕಾಲಾವಕಾಶ ಕೇಳಿದ್ದು, ಪೀಠೋಪಕರಣಗಳನ್ನು ದೂರುದಾರರು ಹಿಂದಿರುಗಿಸಿದ್ದಾರೆ. ಎರಡು ತಿಂಗಳೊಳಗೆ ಪರಿಹಾರ ಪಾವತಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X