ಮೈಸೂರು | ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಮನೆ ಮೇಲೆ ಪೊಲೀಸ್ ದಾಳಿ; ಇಬ್ಬರು ಆರೋಪಿಗಳ ಬಂಧನ

Date:

Advertisements

ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಮನೆಯ ಮೇಲೆ ಮೈಸೂರು ನಗರದ ಉದಯಗಿರಿ ಠಾಣೆ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ಸಮಯಲ್ಲಿ ಒಟ್ಟು 154 ಕೆಜಿ 450 ಗ್ರಾಂ ಗಾಂಜಾ ಪತ್ತೆಯಾಗಿದೆ.

ಮೈಸೂರು ನಗರದ ಉದಯಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಯಾಣಗಿರಿ, ಕೆಹೆಚ್‌ಬಿ ಕಾಲೋನಿಯ ಮನೆಯೊಂದರಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿರುವ ಬಗ್ಗೆ ಉದಯಗಿರಿ ಠಾಣಾ ಪೊಲೀಸರಿಗೆ 2024ರ ನವೆಂಬರ್ 12ರಂದು ಬಂದ ಖಚಿತ ಮಾಹಿತಿಯ ಮೇರೆಗೆ ಉದಯಗಿರಿ ಪೊಲೀಸರು ಸದರಿ ಮನೆಯ ಮೇಲೆ ದಾಳಿ ಮಾಡಿದ್ದರು.

8 ಪ್ಲಾಸ್ಟಿಕ್ ಚೀಲದಲ್ಲಿ ಹಲವು ಪೊಟ್ಟಣ್ಣಗಳನ್ನಾಗಿಟ್ಟಿದ್ದ ಒಟ್ಟು 154 ಕೆಜಿ 450ಗ್ರಾಂ ಗಾಂಜಾ, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಹಾಜರು ಪಡಿಸಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸರ್ಕಾರಿ ನೌಕರರ ಚುನಾವಣೆ; ಮಧು ಬಂಗಾರಪ್ಪನವರ ಮಾರ್ಗದರ್ಶನ ಪಡೆದ ಅಭ್ಯರ್ಥಿಗಳು

ಗಾಂಜಾ ಆರೋಪಿಗಳ ವಿಚಾರಣಾ ಕಾಲದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿಯ ಬಗ್ಗೆ ಮಾಹಿತಿ ನೀಡಿದ್ದು, ಸದರಿ ಆರೋಪಿಯ ಪತ್ತೆ ಕಾರ್ಯ ಮುಂದುವರೆದಿದೆ.

ಮೈಸೂರು ನಗರ ಪೊಲೀಸ್ ಆಯುಕ್ತರು ಹಾಗೂ ಉಪ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ದೇವರಾಜ ವಿಭಾಗದ ಎಸಿಪಿ ಶಾಂತಮಲ್ಲಪ್ಪ ನೇತೃತ್ವದಲ್ಲಿ ಉದಯಗಿರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸುಧಾಕರ್ ಕೆ ಎನ್, ಪಿಎಸ್ಐ ಸುನೀಲ್ ಸಿ ಎನ್, ಆನಂದ್ ಹೆಚ್ ಎಂ, ನಾಗರಾಜ ನಾಯಕ ಬಿ ಜಿ, ರೂಪೇಶ್ ಸಿ ಎಂ, ಸಿಬ್ಬಂದಿಗಳಾದ ರಾಜು ಸಿ, ಮಹೇಶ, ಶಿವಪ್ರಸಾದ್, ರಾಜೇಸಾಬ್, ಕರಿಯಪ್ಪ, ಪ್ರಕಾಶ್ ರಾಠೋಡ್, ಸಂತೋಷ್ ಪವಾರ್, ಸುಹೇಲ್, ರಾಜೇಶ್, ಆದರ್ಶ್, ನಂದಿತ, ನಾಜೀಯಾ ಶರೀಫ್ ಕಾರ್ಯಾಚರಣೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

Download Eedina App Android / iOS

X