ಗದಗ | ಡಾ. ಎಂ ಎಂ ಕಲಬುರ್ಗಿ ಬಹುಶಿಸ್ತೀಯ ಅಧ್ಯಯನಕಾರರಾಗಿದ್ದರು : ಡಾ. ವೀರಣ್ಣ ರಾಜೂರು

Date:

Advertisements

ಪ್ರಚಲಿತ ಕಾಲದ ಸಂಶೋಧಕರು ಒಂದೊಂದು ಕ್ಷೇತ್ರಕ್ಕೆ ಸೀಮಿತವಾಗಿದ್ದು ಡಾ. ಎಂ ಎಂ ಕಲಬುರ್ಗಿಯವರು ಯೋಜನೆ, ಬೋಧನೆ, ಸಂಶೋಧನೆ ಮುಂತಾದ ಐದು ತತ್ವಗಳ ಹಿನ್ನೆಲೆಯ ಬಹುಶಿಸ್ತೀಯ ಅಧ್ಯಯನಕಾರರಾಗಿದ್ದರು ಎಂದು ಹಿರಿಯ ವಿದ್ವಾಂಸ ಡಾ. ವೀರಣ್ಣ ರಾಜೂರು ಅಭಿಪ್ರಾಯಪಟ್ಟರು.

ಕರ್ನಾಟಕ ಸರ್ಕಾರದ ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಧಾರವಾಡ, ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಮತ್ತು ಕೆ.ಎಲ್.ಇ ಸಂಸ್ಥೆಯ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯದ ಕನ್ನಡ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ‘ಡಾ. ಎಂ. ಎಂ. ಕಲಬುರ್ಗಿಯವರ ಸೃಜನ ಸಾಹಿತ್ಯ’ ಎಂಬ ವಿಷಯದ ಕುರಿತಾಗಿ ರಾಜ್ಯ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಕಲಬುರ್ಗಿಯವರ ಸೃಜನಶೀಲ ಶಕ್ತಿ ತುಂಬಾ ಅಗಾಧವಾದದುದು. ಉತ್ತಮ ಸೃಜನಶೀಲ ವ್ಯಕ್ತಿ ಅತ್ಯುತ್ತಮ ಸಂಶೋಧಕನೂ ಆಗಬಲ್ಲ ಎನ್ನುವುದಕ್ಕೆ ಕಲಬುಗಿಯವರ ಬದುಕು ಮಾದರಿ. ಅತ್ಯುತ್ತಮ ಸಂಶೋಧಕನಾದವನು ಸೂರ್ಯಚಂದ್ರರ ಹಾಗೆ ಜಗತ್ತಿಗೆ ಸದಾ ಬೆಳಕನ್ನು ಚೆಲ್ಲುವನು. ಪಾದರಸದಂತಹ ವ್ಯಕ್ತಿತ್ವದ ಅವರು ಉತ್ತಮ ಅಧ್ಯಾಪಕ ಮತ್ತು ಸಂಶೋಧಕ ಹೇಗಿರಬೇಕು ಎಂಬುದಕ್ಕೆ ಮಾದರಿಯಂತಿದ್ದವರು” ಎಂದು ಅಭಿಪ್ರಾಯಿಸಿದರು.

Advertisements

ನಿರಂತರ ಓದು ಮತ್ತು ಅದಮ್ಯ ಉತ್ಸಾಹ ಇವೆರಡೂ ಕಲಬುರ್ಗಿಯವರ ಚಹರೆಗಳಾಗಿದ್ದವು. ಓದಲು ಮತ್ತು ಬರೆಯಲೆಂದೇ ಹುಟ್ಟಿದ ಮನುಷ್ಯನೇನೊ ಎಂಬಷ್ಟು ಹಠದಲ್ಲಿ ಇವರು ಬರೆದ ಪುಸ್ತಕಗಳ ಸಂಖ್ಯೆ 115. ಸುಮಾರು 700ಕ್ಕೂ ಹೆಚ್ಚು ಬಿಡಿಬರಹಗಳನ್ನು ಪ್ರಕಟಿಸಿದ್ದಾರೆ. ಕನ್ನಡ ಗ್ರಂಥ ಸಂಪಾದನೆಯನ್ನು ಒಂದು ಅಧ್ಯಯನ ಶಿಸ್ತಾಗಿ ಅಭಿವೃದ್ಧಿಪಡಿಸುವಲ್ಲಿ ಕಲಬುರ್ಗಿ ವಹಿಸಿದ ಶ್ರಮ ಮತ್ತು ಎಚ್ಚರ ಇವೆರಡೂ ಚರಿತ್ರಾರ್ಹ. ಕಲಬುರ್ಗಿ ಅವರ ಶೋಧಗಳು ಕನ್ನಡ ಸಾಹಿತ್ಯಕಷ್ಟೇ ಅಲ್ಲ, ಕನ್ನಡ ನಾಡು ನುಡಿಯ ಸಂಸ್ಕೃತಿಯ ಶೋಧಗಳಿಗೂ ಮಾದರಿಯಾಗಿವೆ. ಕಲಬುರ್ಗಿ ಅಧ್ಯಯನಶೀಲರಷ್ಟೇ ಅಲ್ಲ, ಅವರೊಬ್ಬ ಸಮರ್ಥ ಸಂಘಟಕರೂ ಆಗಿದ್ದರೆಂಬುದಕ್ಕೆ ಅವರು ಕಟ್ಟಿ ಬೆಳೆಸಿದ ಸಾಹಿತ್ಯಕ, ಸಾಂಸ್ಕೃತಿಕ ಸಂಘಟನೆಗಳೇ ಸಾಕ್ಷಿಯಾಗಿವೆ ಎಂದು ವೀರಣ್ಣ ರಾಜೂರು ಹೇಳಿದರು.

ಇದನ್ನು ಓದಿದ್ದೀರಾ? ಸಚಿವ ಜಮೀರ್ ವಿರುದ್ಧ ಅವಹೇಳನಾಕಾರಿ ಪದಬಳಕೆ: ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್

ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲರನ್ನೂ ಪ್ರೊ. ಪಿ. ಜಿ. ಪಾಟೀಲ ಸ್ವಾಗತಿಸಿದರು. ಪ್ರೊ. ಚಂದ್ರಶೇಖರ ವಸ್ತ್ರದ ಆಶಯ ನುಡಿಗಳನ್ನಾಡಿದರು.

ಡಾ. ರಮೇಶ ಕಲ್ಲನಗೌಡರ ಅವರು ಕಲಬುರ್ಗಿಯವರ ʼಕೆಟ್ಟಿತ್ತು ಕಲ್ಯಾಣʼ ನಾಟಕದ ಕುರಿತಾಗಿ ಮತ್ತು ಡಾ. ವೈ. ಎಂ. ಭಜಂತ್ರಿಯವರು ʼನೀರು ನೀರಡಿಸಿತ್ತುʼ ಕಾವ್ಯದ ಬಗ್ಗೆ ಉಪನ್ಯಾಸ ನೀಡಿದರು. ಡಾ. ಎ. ಕೆ. ಮಠ ಎಲ್ಲರಿಗೂ ವಂದಿಸಿದರು.

ಡಾ. ರಾಮಚಂದ್ರ ಪಡೆಸೂರು ಮತ್ತು ಪ್ರೊ. ಶೃತಿ ಮ್ಯಾಗೇರಿ ನಿರೂಪಿಸಿದರು. ಪ್ರೊ. ವಿಶ್ವನಾಥ ಜಿ. ಡಾ. ಅಂದಯ್ಯ ಅರವಟಗಿಮಠ, ಪ್ರೊ. ಶಿದ್ದಲಿಂಗ ಸಜ್ಜನಶೆಟ್ಟರ್, ಶಿವನಗೌಡ ಗೌಡರ,  ಪ್ರಕಾಶ ಅಸುಂಡಿ, ಜಿ. ಬಿ. ಪಾಟೀಲ ಡಾ. ರಾಜೇಂದ್ರ ಗಡಾದ, ಹನುಮಾಕ್ಷಿ ಗೋಗಿ, ಲಿಂಗರಾಜ ಪಾಟೀಲ ಒಳಗೊಂಡಂತೆ ಎಲ್ಲ ವಿದ್ಯಾರ್ಥಿಗಳು ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X