ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಧರ್ಮ, ಜಾತಿ ನಿಂದನೆ ಮಾಡಿದ್ದ ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಚಿವ ಜಮೀರ್ ಅಹಮದ್ ಖಾನ್ ಅವರ ಆಪ್ತ ಸಹಾಯಕ ಬಿ. ಎಸ್. ಅಶೋಕ್ ನೀಡಿದ ದೂರು ಆಧರಿಸಿ ಬುಧವಾರ ಎಫ್ಐಆರ್ ದಾಖಲಾಗಿದೆ.
ನವೆಂಬರ್ 11ರಂದು ಪುನೀತ್ ಕೆರೆಹಳ್ಳಿ ಅವರು ಯಾವುದೋ ಸ್ಥಳದಲ್ಲಿ ತಮ್ಮ ಸಾಮಾಜಿಕ ಜಾಲತಾಣದ ಫೇಸ್ ಬುಕ್ ಲಿಂಕ್ನಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್ ಅವರ ಕುರಿತು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಿಂದನೆ ಮಾಡಿರುತ್ತಾರೆ. ಧರ್ಮ-ಧರ್ಮಗಳ ನಡುವೆ ದ್ವೇಷ ಬಿತ್ತುವ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ.
ಲೇ @BZZameerAhmedK @hd_kumaraswamy ಅವರನ್ನು ಕರಿಯಾ ಅಂದ ನೀನು ನನ್ನ ಈ ಮಾತುಗಳನ್ನು ಸರಿಯಾಗಿ ಕೇಳುಸ್ಕೋ pic.twitter.com/74kWJR2kUc
— Puneeth Kerehalli (@Puneeth74353549) November 11, 2024
ಪದೇ ಪದೇ ಅವಾಚ್ಯ ಶಬ್ದಗಳಿಂದ ಸಚಿವರನ್ನು ನಿಂದಿಸಿರುತ್ತಾರೆ. ಜತೆಗೆ ಪ್ರಾಣ ಬೆದರಿಕೆ ಸಹ ಹಾಕಿರುತ್ತಾರೆ. ಹೀಗಾಗಿ ಕೂಡಲೇ ಎಫ್ ಐ ಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
