ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ, ರಾಜ್ಯ ಸರಕಾರ 3 ತಿಂಗಳ ಗಡುವು ನೀಡಿರುವುದು ಖಂಡನೀಯ ಎಂದು ಮಾದಿಗ ದಂಡೋರ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಎಂ ವಿ ರಾಮಪ್ಪ ಖಂಡಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಗ್ರಾಮದಲ್ಲಿ ಮಾದಿಗ ಮೀಸಲಾತಿ ಜನಜಾಗೃತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ವಿ ಸುರೇಶ್ ನೇತೃತ್ವದಲ್ಲಿ ಬುಧವಾರ ಆಯೋಜಿಸಿದ್ದ ಡಿಎಸ್‌ಎಸ್ ಕುಂದು ಕೊರತೆ ಸಭೆಯಲ್ಲಿ ಅವರು ಮಾತನಾಡಿದರು.
ಈ ಕೂಡಲೇ ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಬೇಕು. ಜತೆಗೆ ಜಾತಿ ಪ್ರಮಾಣ ಪತ್ರದಲ್ಲಿ ಜಾತಿ ಹೆಸರನ್ನು ಪ್ರತ್ಯೇಕವಾಗಿ ನಮೂದಿಸಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ದಲಿತ ಸಂಘಟನೆಗಳು ಒಗ್ಗೂಡಿ ಉಗ್ರ ಹೋರಾಟ ರೂಪಿಸುತ್ತೇವೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.
ಇದನ್ನೂ ಓದಿ : ಒಳಮೀಸಲಾತಿ | ನ್ಯಾ. ನಾಗಮೋಹನದಾಸ್ ಆಯೋಗ ರಚಿಸಿದ ರಾಜ್ಯ ಸರ್ಕಾರ
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಪಿ ಎಂ ನರಸಿಂಹಯ್ಯ, ಎಂ ನಾರಾಯಣಸ್ವಾಮಿ, ಗಣೇಶ್, ಡಿ ವೆಂಕಟೇಶ, ಕದಿರಪ್ಪ, ಮುನಿಯಪ್ಪ, ನರಸಿಂಹಪ್ಪ, ನಾಗರಾಜ್, ವೆಂಕಟೇಶ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.