ಹುಚ್ಚು ನಾಯಿ ಕಡಿತದಿಂದ ಓರ್ವ ಬಾಲಕ ಗಂಭೀರ ಗಾಯಗೊಂಡ ಘಟನೆ ರಾಯಚೂರು ತಾಲೂಕಿನ ದೇವಸುಗೂರು ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡ ಬಾಲಕನನ್ನು ರಾಮು ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಬಾಲಕ ಮನೆಗೆ ಹೋಗುತ್ತಿದ್ದ ವೇಳೆ ಏಕಾಏಕಿ ಹುಚ್ಚು ನಾಯಿ ದಾಳಿ ಮಾಡಿದೆ ಎನ್ನಲಾಗಿದೆ.
ಸ್ಥಳದಲ್ಲಿ ಕೆಲವು ಸಾರ್ವಜನಿಕರು ನೋಡಿ ನಾಯಿಯನ್ನು ಓಡಿಸಿ ,ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೈಗೆ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶಕ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
ಕಳೆದ ಒಂದು ವಾರದಲ್ಲಿ ರಾಯಚೂರು ನಗರದಲ್ಲಿ ಬೀದಿ ನಾಯಿಗಳು ಕಡಿತದಿಂದ ಮೂವರಿಗೆ ಗಂಭೀರ ಗಾಯಗೊಂಡು ಸಾವು ನೋವು ಅನುಭವಿಸಿದ್ದಾರೆ. ಗುಂಪು ಗುಂಪಾಗಿ ಬೀದಿ ನಾಯಿಗಳು ದಾಳಿ ಮಾಡುವುದಕ್ಕೆ ಮುಂದಾಗುತ್ತಿವೆ. ಅದರೂ ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಎಚ್ಚೆತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ತಕ್ಷಣ ಸಂಬಂಧ ಪಟ್ಟವರು ಗಮನಹರಿಸಬೇಕು. ಬೀದಿ ನಾಯಿಗಳನ್ನು ನಿಯಂತ್ರಿಸಲು ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಬೇಕು ಸಾರ್ವಜನಿಕರು ಆಗ್ರಹಿಸಿದ್ದಾರೆ.
