ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ನವೆಂಬರ್ 16 ರಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಪ್ರಯುಕ್ತ ‘ಬದಲಾಗುತ್ತಿರುವ ಪತ್ರಿಕೋದ್ಯಮದ ಸ್ವರೂಪ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಸಿಕ್ಯಾಬ್ ಎ.ಆರ್.ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಚ್.ಕೆ.ಯಡಹಳ್ಳಿ ಕಾರ್ಯಕ್ರಮ ಉದ್ಘಾಟಿಸಿ ‘ಬದಲಾಗುತ್ತಿರುವ ಪತ್ರಿಕೋದ್ಯಮದ ಸ್ವರೂಪ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಹಾಗೂ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರುದ್ರಪ್ಪ ಆಸಂಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಓಂಕಾರ ಕಾಕಡೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಡಾ.ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ ಸಿಬ್ಬಂದಿ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
