ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನೊಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು. ಮೃತ ದುರ್ದೈವಿ ನಿಟ್ರಹಳ್ಳಿ ನಿವಾಸಿ ಲೋಕೇಶ್ (45) ಎಂದು ಗುರುತಿಸಲಾಗಿದೆ.

ಚಿಂತಾಮಣಿ ಯಿಂದ ಹಾವೇರಿಗೆ ತೆರಳುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಕೊಡಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
