ಮೈಸೂರು | ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ‘ಸಹಕಾರ ಸಪ್ತಾಹ’

Date:

Advertisements

ಮೈಸೂರಿನ ಕೃಷ್ಣಮೂರ್ತಿ ಪುರಂನಲ್ಲಿರುವ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆವರಣದಲ್ಲಿ 71ನೇ ‘ಸಹಕಾರ ಸಪ್ತಾಹ’ಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಮಾತನಾಡಿದ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಖಜಾಂಜಿ ಕೆ ನಾಗರಾಜು, “ಉಳ್ಳವರು ಇತರರಿಗೆ ಸಹಾಯಹಸ್ತ ಚಾಚುವ ಅದಮ್ಯ ಗುಣವನ್ನು ಸರ್ವರೂ ಮೈಗೂಡಿಸಿಕೊಳ್ಳುವಂತೆ ಮಾಡಿ, ಜೀವನಾ ಅಭಿವೃದ್ಧಿಯ ಕಹಳೆ ಮೊಳಗಿಸುವಲ್ಲಿ ತನ್ನದೇ ಆದ ಪಾತ್ರವನ್ನು ಸಹಕಾರಿ ಸಂಘಗಳು ನಡೆಸುತ್ತಿರುವುದು ಶ್ಲಾಘನೀಯ” ಎಂದು ಹೇಳಿದರು.

“ಸಹಕಾರ ತತ್ವವು ಭಾರತದಲ್ಲಿ ಉತ್ಕೃಷ್ಟ ಸಾಧನೆ ಮಾಡಿದೆ. ಯುವಜನರ ಅಭಿವೃದ್ಧಿಯಲ್ಲಿ ಮತ್ತು ಮಹಿಳೆಯರ ಸಬಲೀಕರಣಕ್ಕೆ ಸಹಕಾರಿ ಸಂಘಗಳು ಅತ್ಯುತ್ತಮ ಕಾರ್ಯ ಮಾಡಿವೆ.ಈಗಲೂ ಸಮಾಜದಲ್ಲಿ ನರ ನಾಡಿಗಳಂತೆ ಕೆಲಸ ನಿರ್ವಹಿಸುತ್ತಿದ್ದು. ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುವಲ್ಲಿ ಯಶಸ್ವಿಯಾಗಿವೆ” ಎಂದರು.

Advertisements

ಇದನ್ನು ಓದಿದ್ದೀರಾ? ಮೈಸೂರು | ನ.15 ರಿಂದ 25ರವರೆಗೆ ರೈತ, ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಪ್ರತಿಭಟನೆ: ಬಡಗಲಪುರ ನಾಗೇಂದ್ರ

ಇದೇ ಸಂದರ್ಭದಲ್ಲಿ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ ಡಿ ಗೋಪಿನಾಥ್,ಉಪಾಧ್ಯಕ್ಷ ಎಂ ಎನ್ ಸೌಮ್ಯ, ಮಂಡಲಿ ಸದಸ್ಯರಾದ ಸಿ ವಿ ಪಾರ್ಥಸಾರಥಿ, ಹೆಚ್ ಎಸ್ ಪ್ರಶಾಂತ್ ತಾತಾಚಾರ್,ಎಂ ಆರ್ ಬಾಲಕೃಷ್ಣ ,ಹೆಚ್ ಪಿ ಚೇತನ್, ಎನ್ ಪಣಿರಾಜ್, ವಿಕ್ರಂ ಅಯ್ಯಂಗಾರ್, ಪಿ ಮಹಿಮ, ಎನ್ ನಾಗಶ್ರೀ, ಕೆ ಎನ್ ಅರುಣ್,ಶಿವರುದ್ರಪ್ಪ, ಎಸ್ ರಾಜಮ್ಮ, ಎಂ ಪಿ ಶಾಶ್ವತಿ ನಾಯಕ, ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಗೂ ಸೊಸೈಟಿ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X