ಶಿವಮೊಗ್ಗ | ಸೊರಬದ ತಾವರೆಕೊಪ್ಪದಲ್ಲಿ ಸಂಭ್ರಮದಿಂದ ಜರುಗಿದ ಹೋರಿಹಬ್ಬ

Date:

Advertisements

ಪೈಲ್ವಾನರಾ… ಹಿಡಿರಿ ಹೋರಿ, ಹರಿ ಕೊಬ್ಬರಿ, ಹೊಡಿರಿ ಕೇಕೆ.. ಇದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ತಾವರೆಕೊಪ್ಪ ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬದ ಪರಿ.

ಗ್ರಾಮದಲ್ಲಿ ಹೋರಿ ಹಬ್ಬ ಆಚರಣಾ ಸಮಿತಿ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬ ಅಕ್ಷರಶಃ ರೋಚಕತೆ ತಂದಿತ್ತು. ನೆರೆದವರ ಕೇಕೆ, ಹಲಗೆ ಸದ್ದಿಗೆ ಹೋರಿಗಳ ಹೂಂಕರಿಸುವಿಕೆ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಗಿತ್ತು.

ಮಲೆನಾಡು ಹಾಗೂ ಬಯಲುಸೀಮೆ ಭಾಗದ ಹಬ್ಬವಾಗಿರುವ ಜನಪದ ಕ್ರೀಡೆ ಸಾಂಪ್ರದಾಯಿಕ ಹೋರಿ ಬೆದರಿಸುವ ಹಬ್ಬ ಸಡಗರ ಸಂಭ್ರಮದಿಂದ ಜರುಗಿತು. ದೀಪಾವಳಿಯ ನಂತರ ಗ್ರಾಮೀಣ ಭಾಗದಲ್ಲಿ ಹೋರಿ ಬೆದರಿಸುವ ಹಬ್ಬಕ್ಕೆ ಸಾಕಷ್ಟು ಮಹತ್ವವಿದೆ. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡಿ ಹೋಗುವ ದೃಶ್ಯ ನೋಡುಗರಲ್ಲಿ ಮೈನವಿರೇಳಿಸಿತು. ಹೋರಿಗಳ ಮಾಲೀಕರು ಹೋರಿಗಳಿಗೆ ವಿವಿಧ ಬಗೆಯ ಜೂಲಗಳನ್ನು ಹೊದಿಸಿ, ಬಣ್ಣ ಬಣ್ಣದ ಟೇಪು, ಬಲೂನುಗಳು ಮತ್ತು ಕೊಬ್ಬರಿ ಕಟ್ಟಿ ಶೃಂಗರಿಸಿದ್ದರು.

Advertisements
WhatsApp Image 2024 11 14 at 7.32.12 PM

ಅಖಾಡದಲ್ಲಿ ತಾವರೆಕೊಪ್ಪದ ರಾಜನರಸಿಂಹ, ರಾಜಾ ಹುಲಿ, ಶ್ರೀವೀರ ಕಲ್ಕಿ, ನಾಗನೂರ ನಾಗರಹಾವು, ನರಹಂತಕ, ಚಿಕ್ಕಸವಿ ದೊಡ್ಮನೆ ದೊರೆ, ಶಾಂತಗೇರಿ ಸುಗ್ರೀವ, ಹರೂರು ಘಟಸರ್ಪ, ಯಲವಳ್ಳಿ ಜಮೀನ್ದಾರ, ತಾವರೆಕೊಪ್ಪ ಚಕುವ, ಬಿದರಗೇರಿ ಸ್ನೇಹಜೀವಿ ಶ್ರೀನಂದಿ, ಕೊಲೆಗಾರ ಸಾಮ್ರಾಜ್ಯದ ಪ್ರಳಯ, ಹರಗಿ ಗ್ಯಾಂಗ್ ಸ್ಟಾರ್, ಮಲೆನಾಡ ಹುಲಿ, ಶಿಗ್ಗಾದ ಮೆಜೆಸ್ಟಿಕ್ ಹುಲಿ, ಅಂಬರಕೊಪ್ಪದ ಕಿಂಗ್, ಸೊರಬದ ಸೃಷ್ಟಿಕರ್ತ, ಪೈಲ್ವಾನ, ಸೊರಬದ ಸೈಕೋ, ಬಿದರೇರಿ ಬುಲೇಟ್ ಕಾ ರಾಜ, ಎಎನ್‍ಕೆ ಬ್ಲಾಕ್ ಟೈಗರ್, ಹರೂರು ಜೈ ಹನುಮ, ಹರೂರು ಮಾರಿಕಾಂಬ ಎಕ್ಸ್‍ಪ್ರೆಸ್, ಬಿದರಗೇರಿ ಸೆವೆನ್ ಸ್ಟಾರ್ ಸೇರಿದಂತೆ ವಿವಿಧ ಹೆಸರಿನ ಹೋರಿಗಳು ಓಡಿದವು. ಯುವಕರು ಹೋರಿಗಳನ್ನು ಹಿಡಿದು ಬಲ ಪ್ರದರ್ಶಿಸಿದರೆ, ಜನತೆ ಅದನ್ನು ನೋಡಿ ರೋಮಾಂಚನಗೊಂಡರು.

ಅಖಾಡದಲ್ಲಿ ಹೋರಿಗಳು ಓಡಿ ಹೋಗುವುದನ್ನು ನೋಡಲು ತಾಲೂಕು ಸೇರಿದಂತೆ ನೆರೆಯ ತಾಲೂಕು ಮತ್ತು ಜಿಲ್ಲೆಯ ವಿವಿಧ ಗ್ರಾಮಗಳಿಂದ ಭಾರಿ ಸಂಖ್ಯೆಯಲ್ಲಿ ಹೋರಿ ಪ್ರಿಯರು ಆಗಮಿಸಿದ್ದರು.ಹೋರಿಗಳು ಓಡಿ ಬರುತ್ತಿದ್ದಂತೆ ನೆರೆದವರಿಂದ ಕೇಕೆ, ಶಿಳ್ಳೆ, ಚಪ್ಪಾಳೆಗಳು ಜೋರಾಗಿಯೇ ಕೇಳಿಬಂದವು.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಸಿರಿಧಾನ್ಯಗಳ ಸೇವನೆಯಿಂದ ಉತ್ತಮ ಆರೋಗ್ಯ : ಜಿ.ಪಂ. ಸಿಇಓ ಸೋಮಶೇಖರ್

ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲಪ್ರದರ್ಶನ ತೋರಿದ ಪೈಲ್ವಾನರನ್ನು ಸಮಿತಿ ವತಿಯಿಂದ ಗುರುತಿಸಲಾಯಿತು. ಅಖಾಡದ ಎರಡು ಬದಿಯಲ್ಲಿ ಬೇಲಿ ನಿರ್ಮಿಸಿ, ಒಂದೊಂದೆ ಹೋರಿಗಳನ್ನು ಓಡಿಸುವ ಮೂಲಕ ಸಮಿತಿಯವರು ಸುರಕ್ಷತೆಗೆ ಹೆಚ್ಚಿನ ಗಮನ ನೀಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X