2025ನೇ ವರ್ಷದ ಸಾರ್ವತ್ರಿಕ ರಜಾ ಪಟ್ಟಿ ಪ್ರಕಟ

Date:

Advertisements

2025ನೇ ವರ್ಷದ ಸಾರ್ವತ್ರಿಕ ರಜಾ ದಿನಗಳು ಮತ್ತು ಪರಿಮಿತ ರಜಾ ದಿನಗಳ ಪಟ್ಟಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ. ಮುಂದಿನ ವರ್ಷದಲ್ಲಿ 19 ಸಾರ್ವತ್ರಿಕ ರಜಾ ದಿನಗಳು ಮತ್ತು 20 ಪರಿಮಿತ ರಜಾ ದಿನಗಳು ಇರಲಿವೆ.

ಭಾನುವಾರಗಳಂದು ಗಣರಾಜ್ಯೋತ್ಸವ(ಜ.26), ಯುಗಾದಿ(ಮಾ.30), ಮೊಹರಂ ಕಡೆ ದಿನ(ಜು.6), ಮಹಾಲಯ ಅಮವಾಸ್ಯೆ(ಸೆ.21) ಮತ್ತು ಎರಡನೇ ಶನಿವಾರದಂದು ಕನಕದಾಸ ಜಯಂತಿ(ನ.8) ಬರುತ್ತವೆ. ಹಾಗಾಗಿ, ಆ ರಜೆಗಳ ಬಗ್ಗೆ ಈ ಪಟ್ಟಿಯಲ್ಲಿ ನಮೂದಿಸಿಲ್ಲ.

ರಜಾ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗದಿತ ದಿನಾಂಕದಂದು ಬೀಳದಿದ್ದರೆ, ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗದಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ ಮಂಜೂರು ಮಾಡಬಹುದಾಗಿದೆ.

Advertisements

ಇನ್ನು ದಿನಾಂಕ 03/09/2025 (ಬುಧವಾರ) ಕೈಲ್ ಮೂಹರ್ತ, ದಿನಾಂಕ 18/10/2025 (ಶನಿವಾರ) ತುಲ ಸಂಕ್ರಮಣ ಹಾಗೂ ದಿನಾಂಕ 05/12/2025 (ಶುಕ್ರವಾರ) ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳು

14.01.2025, ಮಂಗಳವಾರ – ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ
26.02.2025, ಬುಧವಾರ – ಮಹಾಶಿವರಾತ್ರಿ
31.03.2025, ಸೋಮವಾರ – ಖುತುಬ್-ಎ-ರಂಜಾನ್
10.04.2025, ಗುರುವಾರ – ಮಹಾವೀರ ಜಯಂತಿ
14.04.2025, ಸೋಮವಾರ – ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ
18.04.2025, ಶುಕ್ರವಾರ – ಗುಡ್‌ ಫ್ರೈಡೆ
30.04.2025, ಬುಧವಾರ – ಬಸವ ಜಯಂತಿ, ಅಕ್ಷಯ ತೃತೀಯ
1.05.2025, ಗುರುವಾರ – ಕಾರ್ಮಿಕ ದಿನಾಚರಣೆ
7.06.2025, ಶನಿವಾರ – ಬಕ್ರೀದ್
15.08.2025, ಶುಕ್ರವಾರ – ಸ್ವಾತಂತ್ರ್ಯ ದಿನಾಚರಣೆ
27.08.2025, ಬುಧವಾರ – ವರಸಿದ್ಧಿ ವಿನಾಯಕ ವ್ರತ
5.09.2025, ಶುಕ್ರವಾರ – ಈದ್-ಮಿಲಾದ್
1.10.2025, ಬುಧವಾರ – ಮಹಾನವಮಿ, ಆಯುಧಪೂಜೆ, ವಿಜಯದಶಮಿ
2.10.2025, ಗುರುವಾರ – ಗಾಂಧಿ ಜಯಂತಿ
7.10.2025, ಮಂಗಳವಾರ – ವಾಲ್ಮೀಕಿ ಜಯಂತಿ
20.10.2025, ಸೋಮವಾರ – ನರಕ ಚತುದರ್ಶಿ
22.10.2025, ಬುಧವಾರ – ಬಲಿಪಾಡ್ಯಮಿ, ದೀಪಾವಳಿ
01.11.2025, ಶನಿವಾರ – ಕನ್ನಡ ರಾಜೋತ್ಸವ
25.12.2025, ಗುರುವಾರ – ಕ್ರಿಸ್‌ಮಸ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X