ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಈ ಮೊದಲು ಖರೀದಿ ಅವಧಿಯನ್ನು ನವೆಂಬರ್ 21ರವರೆಗೆ ನಿಗದಿಪಡಿಸಲಾಗಿತ್ತು. ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಡಿಸೆಂಬರ್ 18ರವರೆಗೆ ಖರೀದಿ ಮಾಡಲು ಅನುಮತಿ ನೀಡಿದೆ. ಪ್ರತಿ ಕ್ವಿಂಟಾಲ್‌ಗೆ 8,682 ರೂ. ನಿಗದಿಪಡಿಸಲಾಗಿದ್ದು, ಇದುವರೆಗೆ 20450 ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
“ಬೆಳಗಾವಿ, ಬೀದರ್, ಧಾರವಾಡ, ಗದಕ, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ” ಎಂದು ಸಚಿವರು ತಿಳಿಸಿದ್ದಾರೆ.