ಶಾಲಾ ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಖಾಸಗಿ ಶಾಲೆ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ಪಲ್ಟಿಯಾಗಿದ್ದು, ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಪಟ್ಟಗುಂದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಸಿ ಎನ್. ಮುಗಳಖೋಡ ಕನ್ನಡ ಮತ್ತು ಆಂಗ್ಲ ಮಾಧ್ಯಮ 1ರಿಂದ 7ನೇ ತರಗತಿ ಓದುವ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿ ಆಗಿದೆ. ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಬಿಇಓ ಅಜೀತ್ ಮನ್ನಿಕೇರಿ ಭೇಟಿ ನೀಡಿ ಮಕ್ಕಳ ಆರೋಗ್ಯದ ಮಾಹಿತಿ ಪಡೆದುಕೊಂಡಿದ್ದಾರೆ.