ಕ್ರೈಂ ರೆಕಾರ್ಡ್ ಬ್ಯೂರೋದ ಎಸ್ ಪಿ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ನಿಂಬರಗಿ ಅವರನ್ನು ಗೃಹ ಇಲಾಖೆಯು ವಿಜಯಪುರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಗಳನ್ನಾಗಿ ವರ್ಗಾಯಿಸಿ ಆದೇಶ ಹೊರಡಿಸಿದೆ.
2014 ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ನಿಂಬರಗಿ ಅವರಿಗೆ ವಿಜಯಪುರ ಜಿಲ್ಲೆಯ ಜವಾಬ್ದಾರಿ ವಹಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ನಾಗಪ್ಪ ಪರೀಟ್ ಆದೇಶಿಸಿದ್ದಾರೆ.
