ಜಿಲ್ಲಾಸ್ಪತ್ರೆ ಮತ್ತು ವಿಮ್ಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಂತರ ಗರ್ಭಿಣಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿದ್ದು, ಸಾವಿನ ನಿಖರ ಕಾರಣ ತಿಳಿಯಲು ಸರ್ಕಾರ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಡಾ.ಸವಿತಾ ಅವರ ನೇತೃತ್ವದ ತಂಡ ರಚಿಸಿದ್ದಾರೆ ಎಂದು ವಿಮ್ಸ್ ನಿರ್ದೇಶಕ ಡಾ. ಗಂಗಾಧರ ಗೌಡ ಅವರು ಹೇಳಿದರು.
ಮಾಧ್ಯಮದವರ ಜೊತೆಗೆ ಮಾತನಾಡಿ, ʼಮೂರು ಜನರ ತನಿಖಾ ತಂಡ ಜಿಲ್ಲಾ ಆಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಸಮಗ್ರ ವರದಿಯನ್ನು ಪಡೆದಿದ್ದಾರೆ. ಡಾ.ಸವಿತಾ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರ ಸಾವಿಗೆ ಕಾರಣ ಏನೆಂಬುದು ತಿಳಿಯಲಿದೆʼ ಎಂದರು.
ʼಇತ್ತೀಚೆಗೆ ಜಿಲ್ಲಾಸ್ಪತ್ರೆಯಲ್ಲಿ 7 ಗರ್ಭೀಣಿ ಮಹಿಳೆಯರ ಶಸ್ತ್ರ ಚಿಕಿತ್ಸೆ ನಂತರ ಸೋಂಕು ಹಾಗೂ ಮುಂತಾದ ಕಾರಣದಿಂದ ಪರಿಸ್ಥಿತಿ ಗಂಭೀರವಾದ ಹಿನ್ನೆಲೆ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದರಲ್ಲಿ ರೋಜಮ್ಮ ಎಂಬುವವರು ರಾತ್ರಿ ಮೃತಪಟ್ಟಿದ್ದಾರೆ. ಉಳಿದಂತೆ ಸುಮಯ್ಯ ಪರಿಸ್ಥಿತಿ ಗಂಭೀರವಾಗಿದ್ದು ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆʼ ಎಂದು ಮಾಹಿತಿ ನೀಡಿದ್ದಾರೆ.
ಅಮೃತ ವಾಣಿ, ಮಹಾಲಕ್ಷ್ಮಿ, ಸುಮಲತಾ, ಸುಮಿತ್ರಾ ಚೇತರಿಸಿಕೊಳ್ಳುತ್ತಿದ್ದಾರೆ. ಮುಸ್ಕಾನ್ ಪರಿಸ್ಥಿತಿ ಗಂಭೀರವಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ 2 ಜನ ಗರ್ಭಿಣಿಯರು ಮೃತಪಟ್ಟಿದ್ದಾರೆ ಎಂದರು.
ಈ ಸುದ್ದಿ ಓದಿದ್ದೀರಾ? ಟಿ-20 | ದಾಖಲೆಗಳೆಲ್ಲಾ ಧೂಳೀಪಟ, ಬ್ಯಾಟಿಂಗ್‌ನಲ್ಲಿ ಅಬ್ಬರಿಸಿ ಗೆದ್ದ ಭಾರತ
ಒಟ್ಟು ಏಳು ಜನ ಗರ್ಭಿಣಿ ಮಹಿಳೆಯರು ಶಸ್ತ್ರ ಚಿಕಿತ್ಸೆ ಬಳಿಕ ವಿಮ್ಸ್ ಆಸ್ಪತ್ರೆಯಲ್ಲಿ ಒಬ್ಬರು ಮೃತಪಟ್ಟಿದ್ದು, ಉಳಿದ 6 ಜನ ಗರ್ಭಿಣಿಯರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಉಳಿದ 5 ಜನ ಗರ್ಭಿಣಿಯರು ಚೇತರಿಸಿಕೊಳ್ಳುತ್ತಿದ್ದಾರೆʼ ಎಂದರು.
