ಬಳ್ಳಾರಿ | ಜಿಲ್ಲಾಸ್ಪತ್ರೆಯಲ್ಲಿ ಮೂರೇ ದಿನದಲ್ಲಿ ಮೂವರು ಬಾಣಂತಿಯರ ಸಾವು

Date:

Advertisements

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್‌ಗೆ ಒಳಗಾಗಿದ್ದ ಮೂವರು ಬಾಣಂತಿಯರು ಮೂರು ದಿನಗಳೊಳಗೆ ಸಾವನ್ನಪ್ಪಿರುವ ದಾರುಣ ಘಟನೆಗಳು ನಡೆದಿವೆ. ಬಾಣಂತಿಯರ ಸಾವಿಗೆ ವೈದ್ಯರ ನಿರ್ಲಕ್ಷ್ಯ ಅಥವಾ ಔಷಧ ರಿಯಾಕ್ಷನ್‌ ಕಾರಣವೆಂದು ಶಂಕಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ.

ಕಳೆದ ವಾರ, ನವೆಂಬರ್ 9ರಂದು ಜಿಲ್ಲಾಸ್ಪತ್ರೆಯಲ್ಲಿ 7 ಮಂದಿ ಗರ್ಭಿಣಿಯರಿಗೆ ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಇವರಲ್ಲಿ, ಇಬ್ಬರು ನವೆಂಬರ್ 10ರಂದು ಸಾವನ್ನಪ್ಪಿದ್ದಾರೆ. ಬಳಿಕ, ಉಳಿದ 5 ಮಂದಿ ಬಾಣಂತಿಯರನ್ನು ವಿಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದಾಗ್ಯೂ, ಓರ್ವ ಬಾಣಂತಿ ಮೂರು ದಿನಗಳ ಬಳಿಕ ಸಾವನ್ನಪ್ಪಿದ್ದಾರೆ.

ಮೃತರನ್ನು ನಂದಿನಿ, ಲಲಿತಮ್ಮ ಹಾಗೂ ರೋಜಾ ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣಗಳು ಇನ್ನೂ ಗೊತ್ತಾಗಿಲ್ಲ. ಪ್ರಕರಣದ ತನಿಖೆಗಾಗಿ ಸರ್ಕಾರ ಮೂವರು ತಜ್ಞ ವೈದ್ಯರ ತಂಡವನ್ನು ರಚಿಸಿದೆ. ತಂಡವು ತನಿಖೆ ನಡೆಸುತ್ತಿದೆ.

Advertisements

ಮೂರು ದಿನಗಳ ಅಂತರದಲ್ಲೇ ಮೂವರು ಬಾಣಂತಿಯರು ಸಾವನ್ನಪ್ಪಿರುವುದು ಆತಂಕ ಹುಟ್ಟುಹಾಕಿದೆ. ಆಸ್ಪತ್ರೆಗೆ ಸಂಸದ ಇ ತುಕಾರಾಂ ಭೇಟಿ ನೀಡಿದ್ದು, “ಬಾಣಂತಿಯರ ಸಾವು ನೋವುಂಟುಮಾಡಿದೆ. ತನಿಖಾ ತಂಡ ತನಿಖೆ ನಡೆಸುತ್ತಿದೆ. ವರದಿ ಬಂದ ಬಳಿಕ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಪರಿಹಾರ ನೀಡಲು ಸರ್ಕಾರದೊಂದಿಗೆ ಚರ್ಚಿಸುತ್ತೇನೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X