ಬಿಬಿಎಂಪಿ ಕಡೆಯಿಂದ ಗುಡ್‌ ನ್ಯೂಸ್‌ | 12,692 ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿ ಪ್ರಕಟ

Date:

Advertisements

ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ 12,692 ಪೌರಕಾರ್ಮಿಕರನ್ನು ಅಂತಿಮವಾಗಿ ಆಯ್ಕೆ ಮಾಡಿದ ಪಟ್ಟಿಯನ್ನು ಇಂದು (ನ.16) ಬಿಡುಗಡೆಗೊಳಿದಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12,692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪಾಲಿಕೆ ವೆಬ್‌ಸೈಟ್ http://bbmp.gov.in/home ನಲ್ಲಿ ಪ್ರಕಟಿಸುವ ಜೊತೆಗೆ, ಆಯಾ ವಲಯಜಂಟಿ ಆಯುಕ್ತರ ಕಚೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಛೇರಿಯಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.

ಅದರಂತೆ, ವಲಯವಾರು ಸ್ವೀಕರಿಸಲಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಕ್ರಮವಹಿಸಿ ಅಂತಿಮವಾಗಿ 12,692 ಪೌರಕಾರ್ಮಿಕರನ್ನು ಆಯ್ಕೆ ಮಾಡಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ಅಂತಿಮ ಆಯ್ಕೆ ಪಟ್ಟಿಯನ್ನು ಆಯಾ ವಲಯ ಜಂಟಿ ಆಯುಕ್ತರ ಕಚೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಪ್ರಕಟಿಸಲಾಗುವುದು. ಅಲ್ಲದೆ ಪಾಲಿಕೆಯ ವೆಬ್‌ಸೈಟ್ ನಲ್ಲೂ ಸಹ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements

ಪೌರಕಾರ್ಮಿಕರ ಹುದ್ದೆಗೆ ಆಯ್ಕೆಯಾಗಿರುವವರು ಯಾವುದೇ ಆಸೆ/ ಆಮಿಷಗಳಿಗೆ ಒಳಗಾಗಬಾರದು ಹಾಗೂ ಮಧ್ಯವರ್ತಿಗಳ ಮಾತುಗಳನ್ನು ಕೇಳಿ ವಂಚನೆಗಳಿಗೆ ಒಳಗಾಗಬಾರದು. ಸದರಿ ಅಂತಿಮ ಆಯ್ಕೆ ಪಟ್ಟಿಯ ವಿವರಣೆ ಅಥವಾ ಮಾಹಿತಿಗಾಗಿ ತಮ್ಮ ವ್ಯಾಪ್ತಿಗೆ ಒಳಪಡುವ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಗೆ ನೇರವಾಗಿ ಭೇಟಿ ನೀಡಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ಅಂತಿಮ ಆಯ್ಕೆಯಾಗಿರುವ ಪೌರಕಾರ್ಮಿಕರು ಮೀಸಲಾತಿಗೆ ಅನುಗುಣವಾಗಿ ಒದಗಿಸಬೇಕಿರುವ ದಾಖಲೆಗಳು:

(1) ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಜಾತಿ ಮೀಸಲಾತಿ ಪ್ರಮಾಣ ಪತ್ರ.
(2) ಕನ್ನಡ ಮಾಧ್ಯಮ ಪ್ರಮಾಣ ಪತ್ರ.
(3) ಗ್ರಾಮೀಣ ಪ್ರಮಾಣ ಪತ್ರ.
(4) ಅಂಗವಿಕಲ ಪ್ರಮಾಣ ಪತ್ರ.
(5) ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ.
(6) ಮಾಜಿ ಸೈನಿಕ ಪ್ರಮಾಣ ಪತ್ರ.
(7) ಕಲ್ಯಾಣ ಕರ್ನಾಟಕ ಪ್ರಮಾಣ ಪತ್ರ.
(8) ತೃತೀಯ ಲಿಂಗ ಪ್ರಮಾಣ ಪತ್ರ.
(9) ಇತರೇ (ಅನ್ವಯಿಸುವ ದಾಖಲೆ ಮಾತ್ರ).

ಆಯ್ಕೆಯಾಗಿರುವ ಪೌರಕಾರ್ಮಿಕರು ತಮ್ಮ ಆಯ್ಕೆಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ವಲಯ ಮಟ್ಟದಲ್ಲಿ ರಚಿಸಲಾಗಿರುವ ದಾಖಲಾತಿ ಪರಿಶೀಲನಾ ತಂಡಗಳ ಮುಂದೆ ದಿನಾಂಕ: 25.11.2024 ರಿಂದ 30.11.2024ರ ವರೆಗೆ ವಲಯ ಮಟ್ಟದಲ್ಲಿ ನೀಡಲಾಗುವ ವೇಳಾಪಟ್ಟಿಯ ಅನುಗುಣವಾಗಿ ಮೇಲ್ಕಂಡಂತೆ ದಾಖಲೆಗಳನ್ನು ಖುದ್ದು ಹಾಜರುಪಡಿಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X