ಮೈಸೂರಿನ ಕೆರ್ಗಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಬಿರ್ಸಾ ಮುಂಡಾ ಜಯಂತಿ ಪ್ರಯುಕ್ತ ‘ಜನ ಜಾತಿ ಗೌರವ’ ಕಾರ್ಯಕ್ರಮ ನಡೆಯಿತು.
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ ಪಾಲ್ಗೊಂಡು ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸೌಲಭ್ಯ ವಿತರಿಸಿ “ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಆದಿವಾಸಿಗಳು ಅನೇಕ ರೀತಿಯಲ್ಲಿ ಕೊಡುಗೆ ನೀಡಿದ್ದು, ಅಂತಹವರ ಸಾಲಿಗೆ ಬಿರ್ಸಾ ಮುಂಡಾ” ಕೂಡ ಸೇರಿದ್ದಾರೆ” ಎಂದರು.
“ಬಿರ್ಸಾ ಮುಂಡಾ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಬುಡಕಟ್ಟು ನಾಯಕರಾಗಿ ಗುರುತಿಸಿಕೊಂಡು, ಬ್ರಿಟಿಷರ ಅನ್ಯಾಯದ ವಿರುದ್ಧ, ಬುಡಕಟ್ಟು ಜನರ ಶೋಷಣೆಯ ವಿರುದ್ಧ ಧ್ವನಿ ಎತ್ತುವ ಮೂಲಕ ಸಮುದಾಯದ ಹಕ್ಕುಗಳಿಗಾಗಿ ಹೋರಾಡಿದರು.
ಆದಿವಾಸಿಗಳ ನೆಲ ಮತ್ತು ಸಂಸ್ಕೃತಿಯನ್ನು ರಕ್ಷಿಸುವುದಾಕ್ಕಾಗಿ ಬಿರ್ಸಾ ಮುಂಡಾ ಅವರು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿದ್ದರು” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಉಡುಪಿ | ನಟನೆಯ ಕಡೆಗೆ ಇಂದಿನ ಯುವಜನತೆ ಹೆಚ್ಚಿನ ಒಲವು: ರಂಗ ನಿರ್ದೇಶಕ ಪ್ರಸನ್ನ
“ಪ್ರಸ್ತುತ ಬುಡಕಟ್ಟು ಸಮುದಾಯದಲ್ಲಿ ಬಿರ್ಸಾ ಮುಂಡಾರನ್ನು ದೇವರಂತೆ ಪೂಜಿಸಲಾಗುತ್ತಿದ್ದು, ಅವರ ಕೊಡುಗೆಯನ್ನು ಗೌರವಿಸಲು, ಅವರ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಹೆಮ್ಮೆ ಎನಿಸುತ್ತಿದೆ” ಎಂದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಶ್ರೀವತ್ಸ, ಸಿ ಎನ್ ಮಂಜೇಗೌಡ, ಸಿಇಒ ಗಾಯತ್ರಿ ಸೇರಿದಂತೆ ಇತರರು ಇದ್ದರು.