ಕಾರು ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ 75 ಲಕ್ಷ ದೋಚಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹರಗಾಪೂರ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ.
ಚಿನ್ನದ ವ್ಯಾಪಾರಿ ಸೂರಜ್ ವನಮಾನೆ ವ್ಯಾಪಾರ ಮುಗಿಸಿ ಹಣದ ಜೊತೆಗೆ ಕೇರಳಕ್ಕೆ ಹೋಗುವ ಸಂದರ್ಭದಲ್ಲಿ ಹೊಂಚು ಹಾಕಿ ಕುಳಿತಿದ್ದ ಕಳ್ಳರು ಕಾರನ್ನು ಹಿಂಬಾಲಿಸಿ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದ ಬಳಿ ಅಡ್ಡಗಟ್ಟಿ ಪಿಸ್ತೂಲ್ ತೋರಿಸಿ ಕಾರಿನಲ್ಲಿದ್ದವರನ್ನು ಕೆಳಗೆ ಇಳಿಸಿ 75 ಲಕ್ಷ ರೂಗಳನ್ನು ಕಾರಿನ ಸಮೇತ ದೋಚಿಕೊಂಡು ಪರಾರಿಯಾಗಿದ್ದಾರೆ.
ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.