ವಿಜಯಪುರ | ಕಳೆದ ಇಪ್ಪತ್ತು ವರ್ಷಗಳ ಮಾಧ್ಯಮ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ: ಪ್ರೊ. ಎಚ್ ಕೆ ಯಡಹಳ್ಳಿ

Date:

Advertisements

ಕಳೆದ ಇಪ್ಪತ್ತು ವರ್ಷಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳು ನಡೆದಿದ್ದು, ನಿಜವಾದ ಪ್ರಜಾಪ್ರಭುತ್ವದ ಸಾಧನೆಗೆ ದಾರಿ ಮಾಡಿಕೊಟ್ಟಿವೆ. ಪತ್ರಿಕಾ ರಂಗಗಳಲ್ಲಿ ಫ್ಯಾಕ್ಟ್‌ ಚೆಕಿಂಗ್ ಎಂಬ ತಂತ್ರಜ್ಞಾನವನ್ನು ಅಳವಡಿಸುವ ಮೂಲಕ ಮಾಧ್ಯಮ ಕ್ಷೇತ್ರ ಇನ್ನೂ ಹೆಚ್ಚು ಜನಪ್ರಿಯತೆ ಪಡೆಯುವ ಮೂಲಕ ಜನರ ವಿಶ್ವಾಸವನ್ನು ಗಳಿಸಿಕೊಂಡಿದೆ ಎಂದು ಸಿಕ್ಯಾಬ್ ಎಆರ್‌ಎಸ್‌ಐ ಮಹಿಳಾ ಕಾಲೇಜಿನ ಪ್ರೊ. ಎಚ್ ಕೆ ಯಡಹಳ್ಳಿ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಪ್ರಯುಕ್ತ ‘ಬದಲಾಗುತ್ತಿರುವ ಪತ್ರಿಕೋದ್ಯಮದ ಸ್ವರೂಪ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಪತ್ರಿಕೆಗಳು ಹೆಚ್ಚು ಪ್ರಜಾಪ್ರಭುತ್ವ ಸಾಧಿಸಿದ್ದು, ಜನರ ಸಮಸ್ಯೆಯನ್ನು ಬಗೆಹರಿಸುವ ಕಾರ್ಯ ಮಾಡಬೇಕಾಗಿದೆ. ಮುದ್ರಣ ಮಾಧ್ಯಮದಲ್ಲಿ ಭಾಷಾ ಶುದ್ಧತೆ, ಭಾಷಾ ಸ್ಪಷ್ಟತೆ ಹೊಂದಿರಬೇಕು. ಆದ್ದರಿಂದ ಪತ್ರಿಕೋದ್ಯಮದ ವಿದ್ಯಾರ್ಥಿಗಳಾದ ನೀವು ಪ್ರತಿದಿನ ಒಂದು ಇಂಗ್ಲೀಷ್ ಮತ್ತು ಕನ್ನಡ ಪತ್ರಿಕೆಯನ್ನು ಓದಬೇಕು” ಎಂದು ಸಲಹೆ ನೀಡಿದರು.

Advertisements

“ಡಿಜಿಟಲ್ ಕ್ರಾಂತಿಯಿಂದಾಗಿ ಪತ್ರಿಕೋದ್ಯಮದ ಸ್ವರೂಪ ಸಂಪೂರ್ಣವಾಗಿ ಬದಲಾಗಿದ್ದು, ಪತ್ರಕರ್ತರು ಕೇವಲ ಪತ್ರಕರ್ತರಾಗಿ ಉಳಿದಿಲ್ಲ. ಹೀಗಾಗಿ ಭವಿಷ್ಯದಲ್ಲಿ ಪತ್ರಕರ್ತರಾಗುವವರು ಹಲವು ಕೌಶಲಗಳನ್ನು ಕರಗತ ಮಾಡಿಕೊಳ್ಳುವುದು ಅಗತ್ಯವಾಗಿದೆ. ಬದಲಾಗುತ್ತಿರುವ ಮಾಧ್ಯಮ ಕ್ಷೇತ್ರದಲ್ಲಿ ಹೊಸ-ಹೊಸ ತಂತ್ರಜ್ಞಾನಗಳನ್ನು ಅಳವಡಿಕೆ ಮಾಡಿಕೊಂಡು ಅತ್ಯಂತ ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ” ಎಂದು ತಿಳಿಸಿದರು.

ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತ ಹಾಗೂ ಹಿರಿಯ ಪತ್ರಕರ್ತ ರುದ್ರಪ್ಪ ಆಸಂಗಿ ಮಾತನಾಡಿ, “ಮಾಧ್ಯಮ ಕ್ಷೇತ್ರದಲ್ಲಿರುವ ಸವಾಲುಗಳನ್ನು ಎದುರಿಸಿ ಧೈರ್ಯ, ಆತ್ಮಸ್ಥೆರ್ಯದಿಂದ ಮುನ್ನುಗ್ಗಿದಾಗ ಮಾತ್ರ ಈ ಕ್ಷೇತ್ರದಲ್ಲಿ ಯಶಸ್ಸು ಕಾಣಲು ಸಾಧ್ಯವಾಗುತ್ತದೆ. ನಿಮ್ಮ ಬರವಣಿಗೆ ಬಡವರ ಪರವಾಗಿರಬೇಕು. ಈ ಕ್ಷೇತ್ರದಲ್ಲಿ ನಿಷ್ಠೆಯಿಂದ ಕಾರ್ಯನಿರ್ವಹಿಸುವವರಿಗಿಂತ ಕೇವಲ ಇದು ಹೆಚ್ಚು ಆಕರ್ಷಕವಾಗಿದೆಯೆಂಬ ಶೋಕಿಗೆ ಬಹಳ ಜನರು ಈ ಕ್ಷೇತ್ರಕ್ಕೆ ಬರುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಅತ್ಯಾಚಾರದಿಂದ ನೊಂದಿದ್ದ ಅಪ್ರಾಪ್ತೆಗೆ ಶಿಶು ಜನನ; ಹೆತ್ತವರಿಂದಲೇ ನವಜಾತ ಶಿಶುವಿನ ಹತ್ಯೆ

ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಶಾಕಡೆ ಮಾತನಾಡಿ, “ಪತ್ರಿಕೋದ್ಯಮ ಕಾಲಘಟ್ಟದಲ್ಲಿ ಬದಲಾವಣೆ ಕಾಣುತ್ತ ಬಂತು. ಅದಕ್ಕೆ ಮುಖ್ಯ ಕಾರಣ ತಂತ್ರಜ್ಞಾನ, ಕಾರ್ಪೊರೇಟ್ ಸಂಸ್ಥೆಗಳು ಮಾಧ್ಯಮಗಳನ್ನು ಖರೀದಿ ಮಾಡುವುದರಿಂದ ಈ ಮಾಧ್ಯಮ ಕ್ಷೇತ್ರ ಏಕಸ್ವಾಮ್ಯತೆಯ ಕಡೆ ಸಾಗುತ್ತಿದೆ. ಇದು ಮಾಧ್ಯಮ ಕ್ಷೇತ್ರಕ್ಕೆ ಧಕ್ಕೆಯನ್ನುಂಟು ಮಾಡುತ್ತಿದೆ. ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಮಾಧ್ಯಮ ಸಶಕ್ತವಾಗಬೇಕು. ಆಗ ಮಾತ್ರ ಪ್ರಜಾಪ್ರಭುತ್ವದ ಉಳಿಯುವಿಕೆ ಸಾಧ್ಯ” ಎಂದರು.

ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X