ಮುಂಬೈ ಕ್ರಿಕೆಟ್ ಸಂಸ್ಥೆಯ ಹಿರಿಯ ಆಯ್ಕೆ ಸಮಿತಿಯು ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಮುಂಬೈ ಟಿ20 ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ನೇಮಿಸಿದೆ.
2025 ರ ಐಪಿಎಲ್ನ ಮೆಗಾ ಹರಾಜು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಈ ಹರಾಜಿನಲ್ಲಿ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಕಳೆದ ಆವೃತ್ತಿಯಲ್ಲಿ ಶ್ರೇಯಸ್ ಅಯ್ಯರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಗೆಲ್ಲಿಸಿಕೊಟ್ಟಿದ್ದರು. ಆದರೆ ಈ ಬಾರಿ ಕೆಕೆಆರ್ ಅವರನ್ನು ತಂಡದಲ್ಲಿ ಉಳಿಸಿಕೊಂಡಿಲ್ಲ.
ಐಪಿಎಲ್‌ನಲ್ಲಿ ಅಯ್ಯರ್ ಅವರು ನಾಯಕತ್ವದ ಉತ್ತಮ ದಾಖಲೆ ಹೊಂದಿದ್ದಾರೆ. ಆದ್ದರಿಂದ ಮೆಗಾ ಹರಾಜಿನಲ್ಲಿ ಅವರಿಗೆ ಹೆಚ್ಚಿನ ಬೇಡಿಕೆಯಿದೆ. ಇದಕ್ಕೆ ಪೂರಕವಾಗಿ ಅನೇಕ ತಂಡಗಳು ಈ ಬಾರಿ ಹೊಸ ನಾಯಕರನ್ನು ಹುಡುಕುತ್ತಿವೆ.
ಈ ಸುದ್ದಿ ಓದಿದ್ದೀರಾ? 428 ರನ್ ಸಿಡಿಸಿ ಲಾರಾ ದಾಖಲೆಗೆ ಹತ್ತಿರವಾದ ಹರಿಯಾಣ ಬ್ಯಾಟರ್
ಮುಂಬೈ ಕ್ರಿಕೆಟ್ ಸಂಸ್ಥೆಯ (ಎಂಸಿಎ) ಹಿರಿಯ ಆಯ್ಕೆ ಸಮಿತಿಯು ಸೈಯದ್ ಮುಷ್ತಾಕ್ ಅಲಿ ಟ್ರೋಫಿಗಾಗಿ ಮುಂಬೈ ಟಿ20 ತಂಡದ ನಾಯಕರಾಗಿ ಶ್ರೇಯಸ್ ಅಯ್ಯರ್ ಅವರನ್ನು ನೇಮಿಸಿದೆ. ಅಯ್ಯರ್ ಅವರ ಯಶಸ್ವಿ ನಾಯಕತ್ವವನ್ನು ಗಮನದಲ್ಲಿಟ್ಟುಕೊಂಡು ಮುಂಬೈ ಮುಖ್ಯವಾದ ಜವಾಬ್ದಾರಿಯನ್ನು ನೀಡಿದೆ.
ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಇದೇ ನವೆಂಬರ್ 23 ರಿಂದ ಪ್ರಾರಂಭವಾಗಲಿದೆ. ಕಳೆದ ಬಾರಿ ಈ ಟೂರ್ನಿಯಲ್ಲಿ ಅಜಿಂಕ್ಯ ರಹಾನೆ, ಮುಂಬೈ ತಂಡವನ್ನು ಮುನ್ನಡೆಸಿದ್ದರು. ಇದೀಗ ರಹಾನೆ ಬದಲಿಗೆ ಅಯ್ಯರ್ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಅಜಿಂಕ್ಯ ರಹಾನೆ ಈಗ ಅಯ್ಯರ್ ನಾಯಕತ್ವದಲ್ಲಿ ಆಡಲಿದ್ದಾರೆ. ಫಿಟ್ನೆಸ್ ಕಾರಣಗಳಿಂದ ತಂಡದಿಂದ ಹೊರಬಿದ್ದಿದ್ದ ಪೃಥ್ವಿ ಶಾ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಆಡಲಿದ್ದಾರೆ.
ಮೆಗಾ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ತಮ್ಮ ಮೂಲ ಬೆಲೆಯನ್ನು 2 ಕೋಟಿ ರೂ.ಗೆ ನಿಗದಿಪಡಿಸಿದ್ದು, ಅವರ ಹೆಸರು ಮೊದಲ ಸೆಟ್‌ನಲ್ಲಿಯೇ ಕಾಣಿಸಿಕೊಳ್ಳಲಿದೆ. ಅಂದರೆ ಮೆಗಾ ಹರಾಜಿನ ಆರಂಭದಲ್ಲಿಯೇ ಅಯ್ಯರ್ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಶ್ರೇಯಸ್ ಅಯ್ಯರ್ ಐಪಿಎಲ್‌ನಲ್ಲಿ ಇದುವರೆಗೆ ಒಟ್ಟು 115 ಪಂದ್ಯಗಳನ್ನು ಆಡಿದ್ದು, ಈ ಅವಧಿಯಲ್ಲಿ ಅವರು 32.24ರ ಸರಾಸರಿಯಲ್ಲಿ 3127 ರನ್ ಗಳಿಸಿದ್ದಾರೆ. ಅಯ್ಯರ್ ತಮ್ಮ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೆ ಏರಿಸುವುದರ ಜೊತೆಗೆ, ದೆಹಲಿ ತಂಡವನ್ನು ಒಮ್ಮೆ ಫೈನಲ್‌ಗೆ ಕೊಂಡೊಯ್ದಿದ್ದಾರೆ.
