ಬೆಳಗಾವಿ | ಅಡ್ಡಾದಿಡ್ಡಿ ವಾಹನ ಚಾಲನೆ: ಲಾರಿ ಚಾಲಕನ ಮೇಲೆ ಗುಂಪು ಹಲ್ಲೆಗೈದು ಹತ್ಯೆ

Date:

Advertisements

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆನಕೋಳಿ ಗ್ರಾಮದಲ್ಲಿ ಅಡ್ಡಾದಿಡ್ಡಿಯಾಗಿ ಲಾರಿ ಚಾಲನೆ ಮಾಡಿದ ಲಾರಿ ಚಾಲಕನ ಹತ್ಯೆ ಮಾಡಿದ ಘಟನೆ ನಡೆದಿದೆ.

ಸಂಕೇಶ್ವರದಿಂದ ಬೆಳಗಾವಿ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಲಾರಿ ಕ್ಯಾಂಟರ್‌ಗೆ ಗುದ್ದಿದ ವೇಳೆ ಪರಸಪ್ಪ ನಾಯಿಕ್‌ಗೆ ಸೇರಿದ ಬೈಕ್‌, ಹಾಗೂ ಹಣಮಂತ ಇಡ್ಲಿಗೆ ಸೇರಿದ ಕ್ಯಾಂಟರ್‌ಗೆ ಗುದ್ದಿದೆ. ಎರಡು ಸಾರಿ ಅಪಘಾತ ಎಸಗಿದರೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಲಾರಿ ಚಾಲಕನನ್ನು ಪರಸಪ್ಪ ಹಾಗೂ ಅವನ ಸ್ನೇಹಿತರು ಅಡ್ಡಗಟ್ಟಿ ವಾಗ್ವಾದ ನಡೆದು ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ.

ಪರಸಪ್ಪ, ಹನಮಂತ, ಈರಪ್ಪ, ಅಮಿತ್ ಮತ್ತೋರ್ವ ಸೇರಿದಂತೆ ಐವರು ಹಲ್ಲೆಗೈದ ಆರೋಪಿಗಳಾಗಿದ್ದು, ಹುಕ್ಕೇರಿ ತಾಲೂಕಿನ ಸೊಲ್ಲಾಪೂರ ಗ್ರಾಮದ ಚಾಲಕ ಅಜೀಮ್ ಇಪ್ಪೇರಿ ತೀವ್ರ ಅಸ್ವಸ್ತಗೊಂಡಿದ್ದರಿಂದ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisements

ಈ ವರದಿ ಓದಿದ್ದೀರಾ? ಬೆಳಗಾವಿ | ಅರಬೆತ್ತಲೆಗೊಳಿಸಿ ಮಹಿಳೆಗೆ ಹಲ್ಲೆ ಪ್ರಕರಣ; ಸಂತ್ರಸ್ತರ ಮನೆಗೆ ಶಾಸಕರು, ಪೋಲಿಸ್ ಆಯುಕ್ತರ ಭೇಟಿ

ಲಾರಿ ಚಾಲಕನ ಹತ್ಯೆಗೆ ಕಾರಣವಾದ ಐವರು ಆರೋಪಿಗಳನ್ನು ಯಮಕನಮರಡಿ ಪೋಲಿಸರು ಬಂಧಿಸಿ ಹಿಂಡಲಗಾ ಜೈಲಿಗೆ ರವಾನೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X