ತುಮಕೂರು ಜಿಲ್ಲೆ, ಸಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹೆಗ್ಗನಹಳ್ಳಿ ಗ್ರಾಮ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ.
ಬಳ್ಳಾರಿ, ಚಳ್ಳಕೆರೆ, ಹಿರಿಯೂರು ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತಿದ್ದ ಬಸ್ ಬೆಳಗ್ಗೆ 7.30ರ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಗಾಯಗೊಂಡ ಪ್ರಯಾಣಿಕರನ್ನ ಸಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಪಲ್ಟಿಯಾಗಿರುವ ಬಸ್ ನಾಗಶ್ರೀ ಟ್ರಾವೆಲ್ಸ್ ಗೆ ಸೇರಿದೆ ಎಂದು ಗುರುತಿಸಲಾಗಿದೆ. ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ದಟ್ಪಣೆಯಾಯಿತು.ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ, ಟ್ರಾಫಿಕ್ ಸಮಸ್ಯೆ ನಿವಾರಣೆ ಮಾಡಿದ್ದಾರೆ.
ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.