ಬೆಳಗಾವಿ ಜಿಲ್ಲೆಯ ಕಿತ್ತೂರು ಕಾಂಗ್ರೆಸ್ ಶಾಸಕ ಬಾಬಾಸಾಹೇಬ್ ಪಾಟೀಲ್ ಹಾಗೂ ಚಿಕ್ಕಮಗಳೂರು ಶಾಸಕ ಎಚ್.ಡಿ ತಮ್ಮಯ್ಯ ಅವರಿಗೆ ಬಿಜೆಪಿಯಿಂದ ₹ 100 ಕೋಟಿ ಆಫರ್ ಮಾಡಲಾಗಿದೆ ಎಂಬ ಸ್ಪೋಟಕ ಹೇಳಿಕೆಯನ್ನು ಶಾಸಕ ರವಿ ಗಣಿಗ ನೀಡಿದ್ದಾರೆ.
ಕಿತ್ತೂರು ಶಾಸಕ ಮತ್ತು ಚಿಕ್ಕಮಗಳೂರಿನ ಶಾಸಕರ ಭೇಟಿಯ ಆಡಿಯೋ, ವಿಡಿಯೋ ರೆಕಾರ್ಡ್ ಇದೆ. ಸಮಯ ನೋಡಿ ಬಿಡುಗಡೆ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಹೇಳಿದ ಮಾತು ಸತ್ಯವಾಗಿದೆ. ಕಾಂಗ್ರೆಸ್ ಶಾಸಕರನ್ನು ವಿರೋಧ ಪಕ್ಷದವರು ಯಾವಾಗ ಯಾವ ಗೆಸ್ಟ್‌ಹೌಸ್‌ಗೆ ಬಂದಿದ್ದರು, ಯಾವ ಏರ್‌ಪೋರ್ಟ್‌ನಲ್ಲಿ ಸಿಕ್ಕಿದ್ದರು ಎನ್ನುವುದರ ಆಡಿಯೋ, ವಿಡಿಯೋ ಎಲ್ಲ ದಾಖಲೆಗಳಿವೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ಗಮನಕ್ಕೆ ತರಲಾಗಿದೆ. ಸದ್ಯದಲ್ಲಿ ಬಿಡುಗಡೆ ಮಾಡಲಾಗುವದು ಎಂದು ಹೇಳಿದ್ದಾರೆ.
ಶಾಸಕ ರವಿಕುಮಾರ ಗಣಿಗ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕಿತ್ತೂರು ಕಾಂಗ್ರೆಸ್ ಶಾಸಕ ಬಾಬಾಸಾಹೇಬ್ ಪಾಟೀಲ್, “ಬಿಜೆಪಿಯ ಯಾವ ನಾಯಕರು ನನ್ನ ಸಂಪರ್ಕ ಮಾಡಿಲ್ಲ. ಸರ್ಕಾರದ ಪ್ರಾರಂಭದ ಅವದಿಯಲ್ಲಿ ಬಿಜೆಪಿ ಪಕ್ಷದಿಂದ ಆಫರ್ ಬಂದಿದ್ದು ನಿಜ” ಎಂದಿದ್ದಾರೆ.
ಇದನ್ನು ಓದಿದ್ದೀರಾ? ಮಂಡ್ಯ | ಒಂದು ಟ್ವೀಟ್‌ನಿಂದ ಏನಾಗುತ್ತದೆ ಎಂದು ಪ್ರಶ್ನಿಸುವವರಿಗೆ ಇಲ್ಲಿದೆ ಉತ್ತರ!
“ಸ್ನೇಹ, ವಿಶ್ವಾಸದ ಮೇಲೆ ಬಿಜೆಪಿ ಪಕ್ಷದಲ್ಲಿನ ಸ್ನೇಹಿತರು ಆಹ್ವಾನ ನೀಡಿದ್ದರು. ಸದ್ಯ ನನಗೆ ಯಾವುದೇ ದುಡ್ಡಿನ ಆಫರ್ ಬಂದಿಲ್ಲ. ರವಿಕುಮಾರ್ ಗಣಿಗ ನೀಡಿರುವ ಹೇಳಿಕೆ ಸಂಪೂರ್ಣ ಸುಳ್ಳು. ಅವರು ಯಾಕೆ ಹೀಗೆ ಹೇಳಿದ್ದಾರೆ ಎಂದು ಅವರಿಗೆ ಕೇಲುವೆ. ಅವರ ಬಳಿ ಆಡಿಯೋ, ವಿಡಿಯೋ ದಾಖಲೆ ಇದ್ದರೆ ಬಿಡುಗಡೆ ಮಾಡಲಿ” ಎಂದು ಶಾಸಕ ಬಾಬಾಸಾಹೇಬ್ ಪಾಟೀಲ ಪ್ರತಿಕ್ರಿಯೆ ನೀಡಿದ್ದಾರೆ.
