ಗದಗ | ಮನರೇಗಾ ಕೂಲಿಕಾರರಿಗೆ ಶ್ರಮಿಕ ಆರೋಗ್ಯ ಅಭಿಯಾನ ಆಯೋಜನೆ

Date:

Advertisements
  • ಉದ್ಯೋಗ ಚೀಟಿ ಹೊಂದಿರುವ ಮನರೇಗಾ ಕೂಲಿಕಾರರು ಶ್ರಮಿಕರಿಗೆ ಅನುಕೂಲ
  • ಮೇ 22ರಿಂದ ಜೂ. 22ರವರೆಗೆ ‘ಗ್ರಾಮ ಆರೋಗ್ಯ ಅಭಿಯಾನ ಆಯೋಜನೆ

ಮನರೇಗಾ ಉದ್ಯೋಗ ಚೀಟಿ ಹೊಂದಿರುವ ಪ್ರತಿಯೊಬ್ಬ ಕೂಲಿಕಾರರು ಅಭಿಯಾನದಡಿ ಆರೋಗ್ಯ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯಯುತ ಜೀವನಕ್ಕೆ ಆಧ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ. ಸುಶೀಲಾ ಬಿ ಸಲಹೆ ನೀಡಿದರು.

“ಗ್ರಾಮೀಣ ಪ್ರದೇಶದಲ್ಲಿ ಮನರೇಗಾ ಯೋಜನೆಯ ಕಾಮಗಾರಿಗಳಲ್ಲಿ ದುಡಿಯುವ ಹೆಚ್ಚಿನ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಮತ್ತು ಸೇವೆ ಒದಗಿಸುವ ಉದ್ದೇಶದಿಂದ ‘ಗ್ರಾಮ ಆರೋಗ್ಯ’ ಅಭಿಯಾನ ನಡೆಸಲಾಗುತ್ತಿದೆ. ಅಭಿಯಾನವು ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನದಡಿ ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ ಹಾಗೂ ಸ್ಥಳೀಯ ಆರೋಗ್ಯ ಇಲಾಖೆ ಸಹಯೋಗದಲ್ಲಿ ಮೇ 22 ರಿಂದ ಜೂನ್ 22ರವರೆಗೆ ನಡೆಯಲಿದೆ” ಎಂದು ಅವರು ತಿಳಿಸಿದ್ದಾರೆ.

“ಗ್ರಾಮೀಣ ಭಾಗದ ಜನರ ಆರೋಗ್ಯ ಸಮಸ್ಯೆಗಳ ನಿವಾರಣೆಗಾಗಿ ಅಭಿಯಾನ ನಡೆಸಲು ಈಗಾಗಲೇ ಗ್ರಾಮ ಪಂಚಾಯತಿವಾರು ಹೆಲ್ತ್ ಸ್ಕ್ರೀನ್ ಕಿಟ್‌ಗಳನ್ನು ಖರೀದಿಸುವಂತೆ ನಿರ್ದೇಶನ ನೀಡಲಾಗಿದೆ. ಈ ಕಿಟ್ ಬಳಸಿಕೊಂಡು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮನರೇಗಾ ಕೂಲಿಕಾರರ ಆರೋಗ್ಯ ತಪಾಸಣೆ ಕಾರ್ಯ ಕೈಗೊಂಡಿದ್ದಾರೆ” ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಸವರಾಜ್ ಅಡವಿಮಠ ತಿಳಿಸಿದ್ದಾರೆ.

Advertisements

“ಆರೋಗ್ಯ ಅಭಿಯಾನವು ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರ ಉಸ್ತುವಾರಿಯಲ್ಲಿ ಆಯೋಜಿಸಲಾಗುತ್ತಿದೆ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಮನರೇಗಾ ಕೂಲಿಕಾರರಿಗೆ ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಡಿಕೆಶಿ, ಗೋ ಮಾತೆ ಹೆಸರಲ್ಲಿ ಕೆಲ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ; ಸಭಾಧ್ಯಕ್ಷರಿಂದ ಆಕ್ಷೇಪ

“ಆರೋಗ್ಯ ಅಭಿಯಾನದಲ್ಲಿ ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಆರೋಗ್ಯ, ರಕ್ತದೊತ್ತಡದಂತಹ ಆರೋಗ್ಯ ಸಮಸ್ಯೆಗಳ ತಪಾಸಣೆಗಳನ್ನು ಮಾಡಲಾಗುತ್ತಿದೆ, ಜೊತೆಗೆ ಒಂದು ವೇಳೆ ಕೂಲಿಕಾರರಲ್ಲಿ ಗಂಭೀರ ಪ್ರಮಾಣದ ಯಾವುದಾದರೂ ಕಾಯಿಲೆಯಿಂದ ಬಳಲುತ್ತಿರುವುದು ಕಂಡುಬಂದಲ್ಲಿ ಆರೋಗ್ಯದ ಸ್ಥಿತಿಗತಿ ಆಧಾರದ ಮೇಲೆ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಗೆ ಕಳುಹಿಸಿ ಉನ್ನತ ಮಟ್ಟದ ವೈದ್ಯಾಧಿಕಾರಿಗಳಿಂದ ಸೂಕ್ತ ಚಿಕಿತ್ಸೆ ನೀಡಲು ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.

ಹಾಗಾಗಿ ಜಿಲ್ಲೆಯ ಎಲ್ಲ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಯ ಉದ್ಯೋಗ ಚೀಟಿ ಹೊಂದಿರುವ ನರೇಗಾ ಸಕ್ರಿಯ ಕೂಲಿಕಾರರು ಶ್ರಮಿಕ ಆರೋಗ್ಯ ಅಭಿಯಾನದ ಅನುಕೂಲತೆಯನ್ನು ಪಡೆದುಕೊಳ್ಳುವಂತೆ ಕೋರಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

Download Eedina App Android / iOS

X