ಧಾರವಾಡ | ಕನಕದಾಸರ ಬದುಕಿನ ಮಜಲುಗಳು ಯುವ ಸಮುದಾಯಕ್ಕೆ ತಲುಪಲಿ: ಮಾರ್ತಾಂಡಪ್ಪ ಕತ್ತಿ

Date:

Advertisements

ಕನಕದಾಸರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸಮಾಜದಲ್ಲಿ ಸರ್ವರೂ ಸಮಾನರು ಎಂಬ ಸಂದೇಶ ಜಗತ್ತಿಗೆ ಕೊಟ್ಟ ಕನಕದಾಸರ ಆದರ್ಶ ಯುವ ಪೀಳಿಗೆಗೆ ಮಾದರಿ. ಅವರ ಬದುಕಿನ ಮಜಲುಗಳನ್ನು ಯುವ ಸಮುದಾಯಕ್ಕೆ ತಲುಪಿಸುವ ಕಾರ್ಯವಾಗಬೇಕು ಎಂದು ಧಾರವಾಡ ಕಸಾಪ ತಾಲೂಕ ಗೌರವ ಕಾರ್ಯದರ್ಶಿ, ಸಾಹಿತಿ ಮಾರ್ತಾಂಡಪ್ಪ ಕತ್ತಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಕನಕ ಜಯಂತಿ ಅಂಗವಾಗಿ ಕಸಾಪ ಸಭಾಭವನದಲ್ಲಿ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಕನಕದಾಸರ ಬದುಕಿನ ಕುರಿತು ಉಪನ್ಯಾಸ ಮಾಡಿ ಮಾತನಾಡುತ್ತಾ, ಅಸಮಾನತೆ ತುಂಬಿದ್ದ ಸಮಾಜದಲ್ಲಿ, ‘ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ’ ಎಂದು ಜನರನ್ನು ಎಚ್ಚರಿಸಿದ ಕನಕದಾಸರು ತಮ್ಮ ಜಾಗೃತ ಕೀರ್ತನೆಗಳ ಮೂಲಕ ಸಾಮಾಜಿಕ ಪರಿವರ್ತನೆಗೆ ಕಾರಣರಾದರು. ಭಕ್ತಿ ಮಾರ್ಗದತ್ತ ಜನರನ್ನು ಕೊಂಡೊಯ್ದ ಕನಕದಾಸರ ಮೌಲ್ಯಯುತ ಕೀರ್ತನೆಗಳ ಸಾರವನ್ನು ಎಲ್ಲರೂ ಅರಿಯಬೇಕಾಗಿದೆ ಎಂದು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಸಮಾನತೆ ವಿರುದ್ಧ ಹೋರಾಡಿದ ದಾರ್ಶನಿಕರ ಪಟ್ಟಿಗೆ ಕನಕದಾಸರು ಸೇರುತ್ತಾರೆ. ಸಮಾನತೆಗಾಗಿ ಇಡೀ ಬದಕನ್ನೆ ಸವೆಸಿದ ಕನಕದಾಸರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

Advertisements

ವೇದಿಕೆಯಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ. ಜಿನದತ್ತ ಹಡಗಲಿ ಮತ್ತು ಕೆ ಎಸ್ ಕೌಜಲಗಿ, ತಾಲೂಕಾ ಕಸಾಪ ಗೌರವ ಕಾರ್ಯದರ್ಶಿ ಉಮಾ ಬಾಗಲಕೋಟ ಇದ್ದರು. ಗಾಯಕ ಬಸವರಾಜ ಗೊರವರ, ಪ್ರೇಮಾನಂದ ಶಿಂಧೆ, ಮೇಘಾ ಹುಕ್ಕೇರಿ ಕೀರ್ತನೆಗಳನ್ನು ಪ್ರಸ್ತುತ ಪಡಿಸಿದರು. ತಾಲೂಕಾಧ್ಯಕ್ಷ ಮಹಾಂತೇಶ ನರೇಗಲ್ಲ ನಿರೂಪಿಸಿದರು, ಪ್ರಮೀಳಾ ಜಕ್ಕಣ್ಣವರ ಸ್ವಾಗತಿಸಿದರು. ಉಮಾ ಬಾಗಲಕೋಟ ವಂದಿಸಿದರು.

ಇದನ್ನು ಓದಿದ್ದೀರಾ? ಮನುವಾದದ ಮಡಿವಂತಿಕೆ, ಜಾತಿ ವ್ಯವಸ್ಥೆ ವಿರುದ್ಧ ಸಿಡಿದೆದ್ದ ಬಂಡಾಯಗಾರ ಕನಕದಾಸ

ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾ ಸಂಘಟಕ ಎಫ್ ಬಿ ಕಣವಿ, ಶಾಂತವೀರ ಬೇಟಗೇರಿ, ಡಾ. ಶರಣಮ್ಮ ಗೋರೆಬಾಳ, ಸುಮಂಗಲಾ ದಂಡಿನ, ಗೀತಾ ಕುಲಕರ್ಣಿ, ಗಂಗಾಧರ ಗಾಡದ, ಉದಯಚಂದ ದಿಂಡವಾರ, ಎಮ್ ಪಿ ಕುಂಬಾರ, ಸಿದ್ದರಾಮ ಹಿಪ್ಪರಗಿ, ಗೀತಾ ಕುಲಕರ್ಣಿ, ಸುನಂದಾ ಯಡಾಲ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

Download Eedina App Android / iOS

X