ಕೊಪ್ಪಳ | ರೈತರ ನಾನಾ ಬೇಡಿಕೆ ಈಡೇರಿಸಲು ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

Date:

Advertisements

ರೈತರ ಸಾಲ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ವಕ್ಫ್‌ನಿಂದ ರೈತರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಸೇರಿ ನಾನಾ ವಿವಿಧ ರೈತರ ಬೇಡಿಕೆಯನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವಾಲ್ಮೀಕಿ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದರು.

ಆಡಳಿತ ಮತ್ತು ವಿರೋಧ ಪಕ್ಷಗಳು ರೈತರ, ಕಾರ್ಮಿಕರ, ಜನ ಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿಯನ್ನು ಮರೆತು ಪರಸ್ಪರ ಒಬ್ಬರ ಮೇಲೊಬ್ಬರು ಆರೋಪ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಆರೋಪಿಸಿದರು.

ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಅತಿವೃಷ್ಟಿ ಅನಾವೃಷ್ಟಿ ಬೆಳೆ ನಷ್ಟಕ್ಕೆ ಸಮವಾಗಿ ಪರಿಹಾರ ಕೊಡದ ಕಾರಣ ಮತ್ತು ಕಾರ್ಮಿಕರಿಗೆ ಕನಿಷ್ಠ ವೇತನ ಸಹ ಕೊಡದೆ ದುಡಿಸಿಕೊಳ್ಳುತ್ತಿರುವುದರಿಂದ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ದೂರಿದರು.

Advertisements
WhatsApp Image 2024 11 19 at 5.20.53 PM

ರೈತ ಬೆಳೆದ ಎಲ್ಲ ಬೆಳೆಗಳಿಗೆ ತಕ್ಷಣವೇ ಖರೀದಿ ಕೇಂದ್ರವನ್ನು ತೆರೆದು ಖರೀದಿಸಬೇಕು, ರೈತರ ಬೆಳೆಯನ್ನು ಹಾಳು ಮಾಡುತ್ತಿರುವ ಕಾಡು ಪ್ರಾಣಿಗಳ ಹಾವಳಿಯನ್ನು ತಪ್ಪಿಸಬೇಕು. ಇದರಿಂದ ನಷ್ಟ ಅನುಭವಿಸುತ್ತಿರುವ ರೈತರಿಗೆ ಪರಿಹಾರ ನೀಡಬೇಕು ಎಂದರು.

ರೈತರ ಬೇಡಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ನವೆಂಬರ್ 26ರಂದು ದೇಶದ 500 ಜಿಲ್ಲೆಗಳಲ್ಲಿ ಎಚ್ಚರಿಕೆ ರ್‍ಯಾಲಿ ನಡೆಸಲು ತೀರ್ಮಾನಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ,ದುಡಿಯುವ ಜನರು ,ಮಹಿಳೆಯರು ಸೇರಬೇಕು ಎಂದು ಇದೇ ವೇಳೆ ಕರೆ ನೀಡಿದರು.

ಇದನ್ನು ಓದಿದ್ದೀರಾ? ಮಂಡ್ಯ | ಸೀಟ್ ಬೆಲ್ಟ್ ಧರಿಸದ ಚಾಲಕನಿಗೆ ₹18 ಸಾವಿರ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರು!

ಈ ವೇಳೆ ರಾಜ್ಯ ಮುಖಂಡ ನಜೀರ್ ಸಾಬ್ ಮೂಲಿಮನಿ, ಕನಕಗಿರಿ ತಾಲೂಕು ಅಧ್ಯಕ್ಷ ಗಣೇಶ್ ಇಳಿಗೇರ್, ಡಿ ಎಚ್ ಪೂಜಾರ , ಕರಿಯಪ್ಪ ಗುಡಿಮನಿ, ದುರುಗೇಶ್ ಬರಗೂರು ಇನ್ನಿತರರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X