ಕಾರ್ಮಿಕರನ್ನು ಕೆಲಸಕ್ಕೆ ಕರೆದೊಯ್ಯುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಕೂಲಿಗೆ ತೆರಳುತ್ತಿದ್ದ ಪದವೀಧರೆ ಯುವತಿ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಸೋಮವಾರ ನಡೆದಿದೆ.
ಜಿಲ್ಲೆಯ ಸೇಡಂ ತಾಲೂಕಿನ ಇಟಕಲ್ ಗ್ರಾಮದ ನಿವಾಸಿ ಬುಜ್ಜಮ್ಮ (24) ಮೃತ ಪದವೀಧರೆ. ಗಾಯಗೊಂಡ ಕಾರ್ಮಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಯಾದಗಿರಿ ಹಾಗೂ ರಾಯಚೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಸೋಮವಾರ ಬೆಳಿಗ್ಗೆ ಹತ್ತಿ ಬಿಡಿಸುವ ಕೆಲಸಕ್ಕೆಂದು ಕೊಂಕಲ್ ವ್ಯಾಪ್ತಿಯಲ್ಲಿ ಪಿಕಪ್ ವಾಹನದಲ್ಲಿ 18 ಜನ ಕಾರ್ಮಿಕರು ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಜನವರಿ 17ರಂದು ತೆರೆಗೆ
ಗಾಯಗೊಂಡ ಕಾರ್ಮಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಯಾದಗಿರಿ ಹಾಗೂ ರಾಯಚೂರು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.