ಬೆಂಗಳೂರು ಟೆಕ್ ಶೃಂಗಸಭೆ 2024 | 27ನೇ ಆವೃತ್ತಿ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Date:

Advertisements

ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್‌ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾ ಆಯೋಜಿಸಿದ್ದ ‘ಬೆಂಗಳೂರು ಟೆಕ್ ಶೃಂಗಸಭೆ 2024ರ 27ನೇ ಆವೃತ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಟೆಕ್ ಅನ್ ಬೌಂಡ್ ಥೀಮ್ ನಡಿ ಆಯೋಜಿಸಿದ್ದ ಬಿಟಿಎಸ್ ಶೃಂಗಸಭೆಯ‌ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶೃಂಗಸಭೆಯ ಮಹತ್ವ ಕುರಿತು ಮಾತನಾಡಿದರು.

ಜರ್ಮನಿಯ ಆರ್ಥಿಕ ವ್ಯವಹಾರ ಮತ್ತು ಫೆಡರಲ್ ಸಚಿವಾಲಯದ ಸ್ಟಾರ್ಟ್‌ಅಪ್‌ಗಳ ಆಯುಕ್ತ ಡಾ. ಅನ್ನಾ ಕ್ರಿಸ್ಟ್‌ಮನ್ ಮತ್ತು ಫ್ರಾನ್ಸ್‌ನ ಆರ್ಥಿಕ ಅಭಿವೃದ್ಧಿಯ ರಿಕವರಿ ವಿಭಾಗದ ಉಪಾಧ್ಯಕ್ಷೆ ಅಲೆಕ್ಸಾಂಡ್ರಾ ಡಬ್ಲಾಂಚೆ , ಡಾ.ಏಕ್ರೂಪ್ ಕೌರ್, ಐಎಎಸ್, ಸರ್ಕಾರದ ಕಾರ್ಯದರ್ಶಿ, ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ ಉಪಸ್ಥಿತರಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರ – ಭಾರತವನ್ನು ದೇಶವಾಗಿ ಉಳಿಸಿಕೊಳ್ಳಲು ಶಾಂತಿ, ಸೋದರತೆ ಅಗತ್ಯವೆಂದು ಪ್ರಧಾನಿ ಅರಿತಿರುವರೇ?

ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯು ಸ್ಪೂರ್ತಿದಾಯಕ ಗಮನಾರ್ಹ ಸಾಧನೆಗಳಿಗಾಗಿ ಸ್ವಿಗ್ಗಿಯ ಸಿಇಒ ಮತ್ತು ಸಹ-ಸಂಸ್ಥಾಪಕ ಶ್ರೀಹರ್ಷ ಮೆಜೆಟಿಯವರನ್ನು ಸನ್ಮಾನಿಸಲಾಯಿತು. ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ತನ್ನ 40 ನೇ ವರ್ಷದ ಅಸ್ತಿತ್ವಕ್ಕೆ ಬೆಂಗಳೂರು ಮತ್ತು ಭಾರತದಲ್ಲಿ ಗಮನಾರ್ಹ ಪ್ರವೇಶಕ್ಕಾಗಿ ಗೌರವಿಸಲ್ಪಟ್ಟಿದೆ. ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಅವರನ್ನು ಪುರಸ್ಕರಿಸಲಾಯಿತು.

BTS 2024 ರಲ್ಲಿ ಟೆಕ್ ಪ್ರದರ್ಶನವನ್ನು ಸಿಎಂ ಸಿದ್ದರಾಮಯ್ಯ ಅವರು ಗ್ರಾವಿಟಿ ಇಂಡಸ್ಟ್ರೀಸ್ ವಿನ್ಯಾಸಗೊಳಿಸಿದ ಫ್ಯೂಚರಿಸ್ಟಿಕ್ ಜೆಟ್ ಸೂಟ್‌ನಲ್ಲಿದ್ದ ಬಿಟಿಎಸ್ ಫ್ಲೈಯಿಂಗ್ ಮ್ಯಾನ್‌ನೊಂದಿಗೆ ಆಗಮಿಸಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X