ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ವತಿಯಿಂದ ನವೆಂಬರ್ 22ರಂದು ಬೆಳಗ್ಗೆ 10.45ಕ್ಕೆ ಸರ್ಕಾರಿ ಪ್ರೌಢ ಶಾಲೆ ಕೋಡ್ಲಾ ಆವರಣದಲ್ಲಿ ‘ಕನ್ನಡ ಜಾಗೃತಿ’ ಪ್ರಶಸ್ತಿ ಪ್ರದಾನ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಪಾಧ್ಯಕ್ಷ ವರದಾ ಸ್ವಾಮಿ ಬಿ. ಹಿರೇಮಠ ತಿಳಿಸಿದ್ದಾರೆ.
ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ತಾಲೂಕ ಪದಾಧಿಕಾರಿಗಳು ಹಾಗೂ ವಲಯ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಗ್ರಾಮ ಘಟಕದ ಅಧ್ಯಕ್ಷರು ಎಲ್ಲಾ ಕಾರ್ಯಕರ್ತರ ನೇತೃತ್ವದಲ್ಲಿ ಸರ್ಕಾರಿ ಪ್ರೌಢ ಶಾಲೆ ಕೋಡ್ಲಾ ಆವರಣದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ರಾಯಚೂರು | ರಸ್ತೆ ಕಾಮಗಾರಿ ವಿಚಾರ: ಕಾಂಗ್ರೆಸ್- ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ
ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಕನ್ನಡ ಝೇಂಕಾರ ಹಾಗೂ ನಿರ್ಗತಿಕ ಮಕ್ಕಳಿಗೆ ಪ್ರೇರಣಾದಾಯಕ ‘ಕನ್ನಡ ಜಾಗೃತಿ’ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕನ್ನಡದ ಅಭಿಮಾನಿಗಳಿಗೂ ಹಾಗೂ ಸಂಘಟನೆಯ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.
