ಶಿವಮೊಗ್ಗ | ಮಾರುತಿ ಓಮ್ನಿ ಕಾರಿಗೆ ಬೆಂಕಿ; ಐದು ಜನರ ಪೈಕಿ ಒಬ್ಬರಿಗೆ ಸಣ್ಣಪುಟ್ಟ ಗಾಯ

Date:

Advertisements

ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮಾರುತಿ ಓಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಐದು ಜನರ ಪೈಕಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಶಿವಮೊಗ್ಗದ ಇಮಾಮ್ ಬಾಡಾ ನಿವಾಸಿಯಾಗಿರುವ ಮೊಹಮದ್ ಸನಾ ಉಲ್ಲಾ ಎಂಬುವವರು ತಮಗೆ ಪರಿಚಯವಿರುವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಿದ್ದ ಕಾರಣ ಮಂಗಳೂರಿಗೆ ಹೋಗಿ ವಾಪಾಸ್ ಶಿವಮೊಗ್ಗಕ್ಕೆ ಬರುವಾಗ ಹೊನ್ನಾಪುರದ ಬಳಿ ಮಾರುತಿ ಓಮ್ನಿಗೆ ಬೆಂಕಿ ಹತ್ತಿಕೊಂಡಿದೆ.

ಐದು ಜನರಿದ್ದ ವಾಹನದಲ್ಲಿ ಓರ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ. ಬೆಂಕಿಗೆ ಕಾರಣ ಸ್ಪಷ್ಟವಾಗಿ ತಿಳಿದು ಬರಬೇಕಿದೆ. ಮಾಹಿತಿ ಪ್ರಕಾರ ಮಾರುತಿ ಓಮ್ನಿಯನ್ನು ಗ್ಯಾಸ್‌ನಲ್ಲಿ ಓಡಿಸುತ್ತಿದ್ದ ಸನಾ ಉಲ್ಲಾ ಇಂದು ಪೆಟ್ರೋಲ್‌ಗೆ ಸ್ವಿಚ್ ಓವರ್ ಮಾಡಿಕೊಂಡಿದ್ದರು. ಈ ಸ್ವಿಚ್ ಓವರ್ ಶಾರ್ಟ್ ಆಗಲು ಕಾರಣವೆಂದು ಮೂಲಗಳು ತಿಳಿಸಿವೆ.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು l ಡಿ.14ರಂದು ಲೋಕ ಅದಾಲತ್: ಸಿವಿಲ್ ನ್ಯಾಯಾಧೀಶ ವೀರಭದ್ರಯ್ಯ

ತುಂಗಾ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X