ಗದಗ | ಶೈಕ್ಷಣಿಕ, ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕದಾಸರ ಕೊಡುಗೆ ಅಪಾರ: ಸಚಿವ ಎಚ್‌ ಕೆ ಪಾಟೀಲ್

Date:

Advertisements

ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಲೋಕಕ್ಕೆ ದಾಸಶ್ರೇಷ್ಠ ಕನಕದಾಸರ ಕೊಡುಗೆ ಅಪಾರ. ಹಾಗಾಗಿ ಇಂದು ಕನಕದಾಸರ ಜಯಂತಿಯನ್ನು ಭಕ್ತಿಪೂರ್ವಕವಾಗಿ, ಅಭಿಮಾನಪೂರ್ವಕವಾಗಿ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ್ ಹೇಳಿದರು.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರ ಸಹಯೋಗದಲ್ಲಿ ಸೋಮವಾರ ನಗರದ ಹಾತಲಗೇರಿ ನಾಕಾ ಬಳಿಯ ಭಕ್ತ ಕನಕದಾಸ ವೃತ್ತದಲ್ಲಿ ಕನದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

“ಭಕ್ತ ಕನಕದಾಸ ಜಯಂತಿ ಆಚರಣೆಯು ಸಾಂಸ್ಕೃತಿಕ ಲೋಕಕ್ಕೆ ಚೇತನವನ್ನು ತೋರಿಸುತ್ತದೆ. ದಾಸ ಸಾಹಿತ್ಯದೊಳಗೆ ಕನಕದಾಸರು ನೀಡಿರುವ ಸಾಂಸ್ಕೃತಿಕ ಲೋಕಕ್ಕೆ ಅವರ ಕೊಡುಗೆ ದೊಡ್ಡ ಪ್ರಮಾಣದಲ್ಲಿ ಆಧ್ಯಾತ್ಮಿಕ ಬೆಳವಣಿಗೆಗೆ ಕಾರಣವಾಗಿದೆ” ಎಂದರು.

Advertisements

“ಕನಕದಾಸರು ಕವಿ, ದಾರ್ಶನಿಕ ಮತ್ತು ಸಂಗೀತಗಾರರಾಗಿ ಬೆಳೆದರು ಮತ್ತು ಕರ್ನಾಟಕದಲ್ಲಿ ಭಕ್ತಿ ಸಾಹಿತ್ಯದ ಯುಗವನ್ನು ಆರಂಭಿಸಿದರು. ಕನಕದಾಸರ ಕಾವ್ಯಗಳು ಕರ್ನಾಟಕ ಶೈಲಿಯಲ್ಲಿ ರಚನೆಯಾದ ಕಾವ್ಯಗಳಾಗಿದ್ದು, ಅವರು ತಮ್ಮ ಎಲ್ಲ ಹಾಡುಗಳಿಗೆ ‘ಕಾಗಿನೆಲೆ ಆದಿಕೇಶವ’ ಎಂಬ ಕಾವ್ಯನಾಮವನ್ನು ಬಳಸಿದ್ದಾರೆ. ನಳಚರಿತ್ರೆ, ಹರಿಭಕ್ತಿಸಾರ, ನೃಸಿಂಹಸ್ತವ, ರಾಮಧಾನ್ಯಚರಿತ್ರೆ ಮತ್ತು ಮೋಹನತರಂಗಿಣಿ ಅವರ ಕೆಲವು ಪ್ರಸಿದ್ಧ ಕೃತಿಗಳಾಗಿವೆ” ಎಂದು ಹೇಳಿದರು.

“ಶಾಲಾ-ಕಾಲೇಕು ವಿದ್ಯಾರ್ಥಿಗಳಿಗೆ ಭಕ್ತ ಕನಕದಾಸರ ದಾಸಸಾಹಿತ್ಯದ ಪುಸ್ತಕಗಳು ದೊರೆಯುವ ಹಾಗೆ ಮಾಡಿ ಕನದಾಸರ ಭಕ್ತಿ ಸಾಹಿತ್ಯವನ್ನು ಪರಿಚಯಿಸಬೇಕಿದೆ” ಎಂದು ಸಚಿವ ಎಚ್ ಕೆ ಪಾಟೀಲ ನುಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ವೈದ್ಯರ ನಿರ್ಲಕ್ಷ್ಯದಿಂದ ವೃದ್ಧೆ ಮಹಿಳೆ ಸಾವು; ಆಸ್ಪತ್ರೆ ಎದುರು ಪ್ರತಿಭಟನೆ

ವಿಧಾನ ಪರಿಷತ್ ಶಾಸಕ ಎಸ್ ವಿ ಸಂಕನೂರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅವರು ಭಕ್ತ ಕನಕದಾಸ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿದರು.

ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಫಕ್ಕೀರಪ್ಪ ಹೆಬಸೂರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ ಬಿ ಅಸೂಟಿ, ತಾಲೂಕು ಗ್ಯಾರಂಟಿ ಅನಿಷ್ಠಾನ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಪ್ರಭು ಬುರಬುರೆ, ರವಿ ದಂಡಿನ, ಪ್ರಕಾಶ ಕರಿ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X