ಸಾಲಬಾಧೆ ತಾಳಲಾಗದೆ ವ್ಯಕ್ತಿಯೊಬ್ಬರು ಜಮೀನನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾಲ್ಕಿ ತಾಲೂಕಿನ ಹುಣಜಿ (ಕೆ) ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ.
ಉದಯಕುಮಾರ್ (42) ಮೃತ ವ್ಯಕ್ತಿ. ಉದಯಕುಮಾರ್ ಸಾಲ ಮಾಡಿಕೊಂಡಿದ್ದರು ಎನ್ನಲಾಗುತ್ತಿದ್ದು. ಸಾಲವನ್ನು ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನಿನ್ನೆ ಸಾಯಂಕಾಲ ತಮ್ಮ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಧನ್ನೂರಾ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ಅಪರಾಧ ವಿಭಾಗದ ಪಿಎಸ್ಐ ವಿರಶೇಟ್ಟಿ ಪಾಟೀಲ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.