ಮಾಧ್ಯಮಗಳಿಗೆ ಕಲಾಪದ ನೇರ ಪ್ರಸಾರಕ್ಕೆ ಅನುಮತಿ ನೀಡಿ; ಕಾಂಗ್ರೆಸ್ ಮುಖಂಡ ಆಗ್ರಹ

Date:

Advertisements
  • ಮಾಧ್ಯಮ ಸ್ವಾತಂತ್ರ್ಯಕ್ಕೆ ಅನುವು ಮಾಡಿಕೊಡಲು ಕಾಂಗ್ರೆಸ್ ಮುಖಂಡರ ಮನವಿ
  • ಮಾಧ್ಯಮ ಸ್ವಾತಂತ್ರ್ಯ ಹರಣ ಮಾಡಿದ್ದ ಬಿಜೆಪಿ ಕ್ರಮ ಖಂಡಿಸಿದ ನಟರಾಜ್‌ ಗೌಡ

ಬಿಜೆಪಿ ಸರ್ಕಾರದ ಅವಧಿಯಲ್ಲಾಗಿದ್ದ ಮಾಧ್ಯಮ ನಿಯಂತ್ರಣವನ್ನು ಸಡಿಲಗೊಳಿಸಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವಂತಹ ವಾತಾವರಣವನ್ನು ರೂಪಿಸಿಕೊಡುವಂತೆ ಕಾಂಗ್ರೆಸ್ ಮುಖಂಡ ನಟರಾಜ್ ಗೌಡ ಒತ್ತಾಯಿಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಒತ್ತಾಯವನ್ನು ಸರ್ಕಾರದೆದುರು ಮಂಡಿಸಿರುವ ಅವರು ನಮ್ಮ ಸರ್ಕಾರದ ಅವಧಿಯಲ್ಲಿ ಸರ್ಕಾರದ ಸಕಲ ಮಾಹಿತಿಗಳು ಜನರಿಗೆ ಪಾರದರ್ಶಕವಾಗಿ ತಲುಪುವಂತಾಗಲಿ ಎಂದು ಆಶಿಸಿದ್ದಾರೆ. ಅವರ ಟ್ವೀಟ್ ಈ ಕೆಳಗಿನಂತಿದೆ.

ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸ, ಮಾಧ್ಯಮಗಳ ಮೂಲಕ ಮಾಹಿತಿಯನ್ನು ಪಡೆಯುವ ಜನಸಾಮಾನ್ಯರ ಹಕ್ಕನ್ನು ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿತ್ತು.

Advertisements

ಕಲಾಪಗಳನ್ನು ಚಿತ್ರಿಸುವ ನೇರ ಪ್ರಸಾರ ಮಾಡುವುದನ್ನು ನಿರ್ಬಂಧಿಸಲಾಗಿತ್ತು. ಸರ್ಕಾರವು ಈ ನಿರ್ಬಂಧವನ್ನು ತಕ್ಷಣವೇ ಹಿಂಪಡೆದು ಮಾಧ್ಯಮಗಳ ಸ್ವಾತಂತ್ರ್ಯವನ್ನು ಪುನರ್ ಸ್ಥಾಪಿಸಬೇಕಾಗಿ ಮನವಿ ಮಾಡುತ್ತೇನೆಂದು ಅವರು ಹೇಳಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಯುವತಿ ಸಾವು: ಬಸವರಾಜ ಬೊಮ್ಮಾಯಿ

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸದನದೊಳಗೆ ಶಾಸಕರ ಮೊಬೈಲ್ ಬಳಕೆ ಹಾಗೂ ಅಶ್ಲೀಲ ವೀಡಿಯೋ ವೀಕ್ಷಿಸಿದ ವಿಚಾರ ಸದನಕ್ಕೆ ಕಪ್ಪು ಚುಕ್ಕಿ ತಂದ ಬಳಿಕ ಸದನದ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮಾಧ್ಯಮಗಳ ಚಿತ್ರೀಕರಣಕ್ಕೆ ಸಭಾಧ್ಯಕ್ಷರು ನಿಷೇಧ ಹೇರಿದ್ದರು.

ಈ ವಿಚಾರದಲ್ಲಿ ಪರ ವಿರೋಧವೂ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ನಟರಾಜ್ ಗೌಡ ಸರ್ಕಾರಕ್ಕೆ ಈ ಮನವಿ ಮಾಡಿ ಮಾಧ್ಯಮ ಸ್ವಾತಂತ್ರ್ಯವನ್ನು ಮರು ಸ್ಥಾಪಿಸುವಂತೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X