ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು ಮದ್ಯ ಮಾರಾಟ ಬಂದ್ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.
ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಮದ್ಯಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ ಕ್ರಮಕೈಗೊಳ್ಳಲಾಗುವುದು. ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.
ಇದನ್ನು ಓದಿದ್ದೀರಾ? ಹಾಸನ l ಅಕ್ರಮವಾಗಿ ಮದ್ಯ ಮಾರಾಟ; ನಾಶ ಪಡಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು
“ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾಗೆಯೇ ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ವೇಳೆಯಲ್ಲೇ “ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ನೀಡಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ” ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸ್ಪಷ್ಟಪಡಿಸಿದರು.
