ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದಲ್ಲಿ ಮನೆಯ ಮುಂದೆ ಮಲಗಿದ ವ್ಯಕ್ತಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ವನ್ನೂರು ಗ್ರಾಮದ ನಿಂಗಪ್ಪ ಬಸಪ್ಪ ಅರವಳ್ಳಿ (41) ಮನೆಯ ಮುಂಭಾಗದಲ್ಲಿ ಮಲಗಿದ್ದಾಗ ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಬೆಳಗಿನ ಜಾವ ಆರು ಗಂಟೆಗೆ ಪತ್ನಿ ನೀಲಮ್ಮ ಮನೆಯ ಬಾಗಿಲು ತೆರೆದು ನೋಡಿದಾಗ ಗಂಡ ಕೊಲೆಯಾಗಿರುವದು ಕಂಡು ಬಂದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಭೀಮಾಶಂಕರ ಗುಳೇದ, ಬೈಲಹೊಂಗಲ ಡಿ.ವಾಯ್.ಎಸ್.ಪಿ ರವಿ ನಾಯ್ಕ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನು ಓದಿದ್ದೀರಾ? ಕೊಪ್ಪಳ | ರೈತರ ನಾನಾ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ
ಆರೋಪಿಗಳ ಪತ್ತೆಗಾಗಿ ಸಿಪಿಐ ರಾಘವೇಂದ್ರ ಹವಾಲ್ದಾರ್ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ನೇಸರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
