ಗದಗ | ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಅಭಿಯಾನ: ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್

Date:

Advertisements

ಗದಗ ಜಿಲ್ಲೆಯ ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣದ ಪಟ್ಟಿ ಸೇರಿಸುವ ಉದ್ದೇಶದಿಂದ ಅಲ್ಲಿನ ಪ್ರಾಚ್ಯ ವಸ್ತುಗಳು, ಶಾಸನಗಳು, ಮೂರ್ತಿಗಳು, ತಾಳೆಗರಿಗಳನ್ನು ವಶಕ್ಕೆ ಪಡೆಯುವ ಉದ್ದೇಶದಿಂದ ನವೆಂಬರ್ 24ರಿಂದ ವಿಶೇಷ ಅಭಿಯಾನ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

ಪ್ರತಿಮೆಗಳು, ಶಿಲ್ಪಗಳು, ಕೆತ್ತೆನೆಯಿಂದ ಕೂಡಿದ ಕಂಬಗಳು ,ಶಿಲಾ ಶಾಸನಗಳು, ನಾಣ್ಯಗಳನ್ನು ಕಳೆದುಕೊಂಡಿದ್ದೇವೆ. ಕೆಲವು ಬಟ್ಟೆ ಒಗೆಯುವ ಕಲ್ಲಾಗಿದ್ದರೆ, ಮತ್ತೆ ಕೆಲವು ಜಾನುವಾರು ಕಟ್ಟು ತಾಣಗಳಾಗಿವೆ. ಆದ್ದರಿಂದ ಸ್ಥಳೀಯರಿಗೆ ಅವುಗಳ ಕುರಿತು ಮನವರಿಕೆ ಮಾಡಿ ಅವರಿಂದ ಅವೆಲ್ಲವನ್ನು ಪಡೆಯಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪಲ್ಲಕ್ಕಿ ಹೊತ್ತು ಗ್ರಾಮಸ್ಥರ ಮನೆ ಮನೆಗೆ ಹೋಗಿ ತಮ್ಮ ಬಳಿ ಇರುವ ಪ್ರಾಚ್ಯ ವಸ್ತುಗಳನ್ನು ಸರ್ಕಾರಕ್ಕೆ ನೀಡುವಂತೆ ಮನವಿ ಮಾಡುತ್ತೇವೆ. ಕೆಲವು ಗುಡಿಗಳು ಮತ್ತು ದೇವಸ್ಥಾನಗಳು ಒತ್ತುವರಿ ಆಗಿವೆ. ಅವುಗಳನ್ನು ಪಡೆಯಲು ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಮನವರಿಕೆ ಮಾಡುತ್ತೇವೆ ಎಂದು ಪಾಟೀಲ ತಿಳಿಸಿದರು.

Advertisements

ಲಕ್ಕುಂಡಿಯಲ್ಲಿ 101 ಗುಡಿಗಳು, 101 ಬಾವಿಗಳು, ಟಂಕಸಾಲೆ ಇರುವುದು ಗಮನಕ್ಕೆ ಬಂದಿದೆ. ಒತ್ತುವರಿ, ನಿರ್ಲಕ್ಷ್ಯ ಮುಂತಾದ ಕಾರಣಗಳಿಂದ ಅವುಗಳನ್ನು ಕಳೆದುಕೊಂಡಿದ್ದೇವೆ. ಅವೆಲ್ಲವನ್ನು ಪಡೆದುಕೊಂಡು ಅಭಿವೃದ್ಧಿಪಡಿಸಿದಾಗಲೇ ವಿಶ್ವ ಪಾರಂಪರಿಕ ತಾಣದ ಪಟ್ಟ ಪಡೆಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನು ಓದಿದ್ದೀರಾ? ಕುಂದಾಪುರ | ರಿವರ್ಸ್‌ ಬರುತ್ತಿದ್ದ ಇನ್ನೋವಾ ಕಾರಿಗೆ ಮೀನಿನ ಲಾರಿ ಡಿಕ್ಕಿ: ಚಾಲಕನ ಸಹಿತ 8 ಮಂದಿ ಗಂಭೀರ

ಐಹೊಳೆಯಲ್ಲಿ ಒತ್ತುವರಿ ಆಗಿದ್ದ ಎಂಟು ದೇವಾಲಯಗಳನ್ನು ಬಿಡಿಸಿಕೊಳ್ಳಲು ಅವರಿಗೆ ಪರ್ಯಾಯವಾಗಿ 13 ಎಕರೆಯಲ್ಲಿ ವ್ಯವಸ್ಥೆ ಮಾಡಲಾಯಿತು, ಎಷ್ಟೋ ಶಾಸನಗಳು ಮತ್ತು ಮೂರ್ತಿಗಳು ತಿಪ್ಪೆ ಗುಂಡಿಯಲ್ಲಿವೆ. ಅವುಗಳ ಐತಿಹಾಸಿಕ ಮಹತ್ವವನ್ನು ಜನರಿಗೆ ತಿಳಿಸಿ ಹೇಳಬೇಕಾಗಿದೆ. ಪ್ರವಾಸೋದ್ಯಮ ಇಲಾಖೆ, ಪ್ರಾಚ್ಯ ಇಲಾಖೆ ಮತ್ತು ಜಿಲ್ಲಾ ಆಡಳಿತ ಸೇರಿ ಒಟ್ಟಿಗೆ ಕೆಲಸ ಮಾಡಲಿವೆ ಎಂದು ಪಾಟೀಲ್ ತಿಳಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X