ಕರ್ನಾಟಕದಿಂದ ಶಬರಿಮಲೆಯ ಅಯ್ಯಪ್ಪ ದೇವಸ್ಥಾನಕ್ಕೆ ತೆರಳಿದ್ದ ಬಸ್ಸೊಂದು ಅಪಘಾತಕ್ಕೀಡಾಗಿರುವ ಘಟನೆ ಕೇರಳದ ವಯನಾಡ್‌ನಲ್ಲಿ ನಡೆದಿದೆ. ಘಟನೆಯಲ್ಲಿ ಕನಿಷ್ಠ 27 ಮಂದಿ ಭಕ್ತರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ
ಮೈಸೂರು ಜಿಲ್ಲೆಯ ಹೊಸೂರು ಗ್ರಾಮದ ಇಬ್ಬರು ಮಕ್ಕಳು ಸೇರಿದಂತೆ 45 ಮಂದಿ ಬಸ್‌ನಲ್ಲಿ ಶಬರಿಮಲೆಗೆ ತೆರಳಿದ್ದರು. ದೇವಸ್ಥಾನದಲ್ಲಿ ಪೂಜೆ ಮುಗಿಸಿ, ಮೈಸೂರಿಗೆ ಹಿಂದಿರುಗುವಾಗ ವಯನಾಡ್‌ನ ತಿರುನೆಲ್ಲಿಯಲ್ಲಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡವರನ್ನು ವಯನಾಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.