ಲಾಡ್ಜ್ ಒಂದರಲ್ಲಿ ಡೆತ್‌ನೋಟ್ ಬರೆದಿಟ್ಟು ಮೈಸೂರಿನ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದ್ದು, ಪ್ರಕರಣ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರಿನಿಂದ ಬಂದಿದ್ದ ರವಿಕುಮಾರ್ ಗೌಡ(50) ಎಂಬುವವರು ಶಿವಮೊಗ್ಗ ನಗರದ ಗಾರ್ಡನ್ ಏರಿಯಾದಲ್ಲಿರುವ ಲಾಡ್ಜ್‌ನಲ್ಲಿ ತಂಗಿದ್ದರು. ಅವರು ತಂಗಿದ್ದ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ತೀರ್ಥಹಳ್ಳಿ | ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ
ಸಾಲದ ವಿಚಾರದಲ್ಲಿ ಮನನೊಂದು ಡೆತ್‌ನೋಟ್‌ನಲ್ಲಿ ಸಾಲಕೊಟ್ಟವನ ಹೆಸರು ಬರೆದು ನೇಣಿಗೆ ಶರಣಾಗಿದ್ದಾರೆ. ಇಂದು ಮರಣೋತ್ತರ ಪರೀಕ್ಷೆ ನಡೆದು ಮೈಸೂರಿಗೆ ವಾಪಸ್ ಕಳುಹಿಸಲಾಗಿದೆ. ಡೆತ್‌ನೋಟ್ ಬರೆದ ಕಾರಣ ಈ ಪ್ರಕರಣದ ಕುರಿತು ಎಫ್ಐಆರ್ ದಾಖಲಾಗಿದೆ.
