ನಬಾರ್ಡ್ ಸಾಲದ ಮೊತ್ತ ಹೆಚ್ಚಿಸಲು ಕೇಂದ್ರ ಸಚಿವರಿಗೆ ಮನವಿ: ಸಿಎಂ ಸಿದ್ದರಾಮಯ್ಯ

Date:

Advertisements

ನಬಾರ್ಡ್ ನಿಂದ ರಾಜ್ಯಕ್ಕೆ ಶೇ.58ರಷ್ಟು ಹಣ ಕಡಿತ ಮಾಡಲಾಗಿದೆ. ಆ ಮೂಲಕ ಕೇಂದ್ರ ಸರಕಾರ ರಾಜ್ಯಕ್ಕೆ ಮತ್ತೊಂದು ಮಹಾ ದ್ರೋಹ ಎಸಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಿದ್ದಾರೆ.

ನವದೆಹಲಿ ಪ್ರವಾಸದ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, “ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ. ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ , ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು” ಎಂದರು.

ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ, ಮಾಧ್ಯಮದವರ ಜೊತೆ ಮಾತನಾಡಿದ್ದ ಸಿದ್ದರಾಮಯ್ಯ “ನಬಾರ್ಡ್ ವತಿಯಿಂದ ಕಳೆದ ವರ್ಷ ರಾಜ್ಯಕ್ಕೆ 5,600 ಕೋಟಿ ರೂ. ಸಾಲ ನೀಡಲಾಗಿತ್ತು. ಆದರೆ ಈ ವರ್ಷ 2,340 ಕೋಟಿ ರೂ. ನೀಡಿದ್ದಾರೆ. ಇದು ಅನ್ಯಾಯವಲ್ಲವೇ? ಸಾಲದ ಪ್ರಮಾಣವನ್ನು ಶೇ.58ರಷ್ಟು ಕಡಿಮೆ ಮಾಡಿದ್ದಾರೆ. ರಾಜ್ಯದಿಂದ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ, ಪ್ರಲ್ಹಾದ್‌ ಜೋಶಿಯವರು ಏನು ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X