ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ ರು ಚನ್ನಬಸಪ್ಪ ಆಯ್ಕೆ

Date:

Advertisements

ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ ರು ಚನ್ನಬಸಪ್ಪ (ಗೊ.ರು.ಚ) ಅವರು ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಗಳು ಇವರ ಆಯ್ಕೆಯನ್ನು ಖಚಿತಪಡಿಸಿವೆ. ಗೊ ರು ಚನ್ನಬಸಪ್ಪ ಅವರು ಈ ಹಿಂದೆ 1992 ರಿಂದ 1995 ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಕೊಪ್ಪಳ (1993), ಮಂಡ್ಯ (1994) ಮತ್ತು ಮುಧೋಳದಲ್ಲಿ (1995)ರಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿದ ಹೆಗ್ಗಳಿಕೆ ಇವರಿಗಿದೆ. ಜಾನಪದ ವಿದ್ವಾಂಸರಾದ ಇವರು ಕರ್ನಾಟಕ ಪ್ರಗತಿಪಥ, ಸಾಕ್ಷಿಕಲ್ಲು, ಬಾಗೂರು ನಾಗಮ್ಮ, ಗ್ರಾಮಗೀತೆಗಳು, ಕರ್ನಾಟಕ ಜನಪದ ಕಲೆಗಳು, ಹೊನ್ನ ಬಿತ್ತೇವು ನೆಲಕೆಲ್ಲ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ.

Advertisements

ಸಂಘಟಕರಾಗಿದ್ದ ಗೊ.ರು. ಚನ್ನಬಸಪ್ಪ ಅವರು ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಗೊಂಡೇದಹಳ್ಳಿಯಲ್ಲಿ ರುದ್ರಪ್ಪಗೌಡರು-ಅಕ್ಕಮ್ಮ ದಂಪತಿಗಳಿಗೆ ಪುತ್ರರಾಗಿ 18.05.1930ರಂದು ಜನಿಸಿದ್ದಾರೆ. ವಿದ್ಯಾರ್ಥಿಯಾಗಿದ್ದಾಗಲೇ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಇವರು 18ನೇ ವಯಸ್ಸಿನಲ್ಲೇ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ವೃತ್ತಿಗೆ ಸೇರಿದರು. ಸರ್ಕಾರಿ ಸೇವೆಯ ಜತೆಗೆ ವಿವಿಧ ಸಂಘಸಂಸ್ಥೆಗಳಿಗಾಗಿ ದುಡಿದರು.

ಗಾಂಧೀ ಗ್ರಾಮದಲ್ಲಿ ಸಮಾಜ ಶಿಕ್ಷಣವನ್ನು ಪಡೆದ ಗೊ.ರು.ಚ ಅವರು ಭೂದಾನ ಚಳವಳಿ, ವಯಸ್ಕರ ಶಿಕ್ಷಣ, ಸೇವಾದಳಗಳಲ್ಲಿ ಕೆಲಸ ಮಾಡಿದ್ದಾರೆ. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ಗಳಿಗೆ ಹೆಡ್‍ಕ್ವಾಟರ್ಸ್‌ ಕಮೀಷನರ್ ಆಗಿ ದುಡಿದಿರುವ ಅವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ.

ಪತ್ರಿಕಾವೃತ್ತಿ ಬಲ್ಲ ಅವರು ‘ಜಾನಪದ ಜಗತ್ತು’, `ಪಂಚಾಯತ್ ರಾಜ್ಯ’, `ಕನ್ನಡ ಸಾಹಿತ್ಯ ಪರಿಷತ್‌ ಪತ್ರಿಕೆ’ ಮೊದಲಾದ ಪತ್ರಿಕೆಗಳಿಗೆ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

Download Eedina App Android / iOS

X