ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರ ಮತ್ತು ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲಿ ಬುಧವಾರ (ನ.20) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.
ಮಹಾರಾಷ್ಟ್ರದಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ 45.43% ರಷ್ಟು ಮತದಾನವಾಗಿದೆ. ಆಘಾತಕಾರಿ ಎನ್ನವಂತೆ ಮತದಾನದ ಪ್ರಮಾಣ ಭಾರಿ ಇಳಿಕೆ ಕಂಡು ಬಂದಿದ್ದು ಮಧ್ಯಾಹ್ನ 1ಗಂಟೆವರೆಗೂ ಶೇ 32.18 ರಷ್ಟು ಮಾತ್ರೆ ಆಗಿತ್ತು. ಮುಂಬೈನಲ್ಲಂತೂ ಕೇವಲ ಶೇ 27.73 ರಷ್ಟು ಆಗಿದೆ. ಈಗ ಮುಂಬೈ ನಗರದಲ್ಲಿ 39.34% ಮತದಾನವಾಗಿದೆ.
ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳಲು ಸ್ಪರ್ಧಿಸುತ್ತಿದೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಅಧಿಕಾರಕ್ಕೆ ಬರುವ ನಿರೀಕ್ಷೆ ಹೊಂದಿದೆ. ಮುಂಬೈನಲ್ಲಿ ನೆಲೆಸಿರುವ ಬಾಲಿವುಡ್‌ನ ಅನೇಕ ಸೆಲಿಬ್ರಿಟಿಗಳು ಮತದಾನ ಮಾಡುತ್ತಿದ್ದಾರೆ. ಎಲ್ಲರಿಗೂ ಮತದಾನ ಮಾಡಲು ಮನವಿ ಮಾಡುತ್ತಿದ್ದಾರೆ.
ಜಾರ್ಖಂಡ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ 61.47% ಮತದಾನವಾಗಿದೆ. ಜಾರ್ಖಂಡ್‌ನ 38 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ. 1 ಗಂಟೆವರೆಗೆ ಶೇ 47.92 ರಷ್ಟು ಮತದಾನವಾಗಿತ್ತು.
ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ಕ್ಷೇತ್ರ ಹಾಗೂ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಮೀರಾಪುರ ಕ್ಷೇತ್ರದಲ್ಲಿ ಬೇರೆಬೇರೆ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಯಾಗಿದೆ. ಪೊಲೀಸರು, ಕೂಡಲೇ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಮತದಾನ ಮುಂದುವರಿದಿದೆ.