ಮಂಡ್ಯ | ಹಿಂದಿ ಹೇರಿಕೆಗೆ ವಿರೋಧ; ರಾಜ್ಯ ಪಠ್ಯಕ್ರಮದಲ್ಲಿ ಹಿಂದಿ ಪಾಠಗಳನ್ನು ಕೈಬಿಡಲು ಒತ್ತಾಯ

Date:

Advertisements

ಉತ್ತರ ಭಾರತದಲ್ಲಿ ಇಲ್ಲದಿರುವ ತ್ರಿಭಾಷಾ ಸೂತ್ರವನ್ನು ಕೇವಲ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ಇದರಿಂದ ಕನ್ನಡ ಮಕ್ಕಳಿಗೆ ಯಾವುದೇ ಪ್ರಯೋಜನವಿಲ್ಲದಿದ್ದರೂ, ಹಿಂದಿಯನ್ನು ಕಲಿಯಲು ಕಡ್ಡಾಯಗೊಳಿಸಲಾಗುತ್ತಿದೆ. ಹಿಂದಿ ಕಲಿತರೆ ಉದ್ಯೋಗ ಮತ್ತು ಪ್ರವಾಸಕ್ಕೆ ಸಹಾಯಕವೆಂಬ ನಕಲಿ ಪ್ರಚಾರ ಮಾಡಲಾಗುತ್ತಿದೆ. ವಾಸ್ತವದಲ್ಲಿ ಉತ್ತರದ ರಾಜ್ಯಗಳ ಲಕ್ಷಾಂತರ ನಿರುದ್ಯೋಗಿಗಳು ಕರ್ನಾಟಕಕ್ಕೆ ವಲಸೆ ಬಂದು ಉದ್ಯೋಗ ಹುಡುಕುತ್ತಿದ್ದಾರೆ. ಹೀಗಿರುವಾಗ, ಹಿಂದಿ ಕಲಿಕೆಯಿಂದ ಕನ್ನಡಿಗರಿಗೆ ಯಾವುದೇ ಉಪಯೋಗವಿಲ್ಲ ಎಂದು ಕರುನಾಡ ಸೇವಕರು ಸಂಘಟನೆಯ ಮೈಸೂರು ವಿಭಾಗದ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ವಿರೋಧ ವ್ಯಕ್ತಪಡಿಸಿದರು.

ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹಿಂದಿ ಪಾಠಗಳನ್ನು ಕೈಬಿಡುವಂತೆ ಹಾಗೂ ಕೇಂದ್ರ ಸರಕಾರದ ಬ್ಯಾಂಕುಗಳು, ರೈಲು ಹಾಗೂ ಅಂಚೆ ಇಲಾಖೆಗಳಂತಹ ವಿವಿಧ ಕ್ಷೇತ್ರಗಳಲ್ಲಿ ಹಿಂದಿ ಹೇರಿಕೆಯನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಿಂದ ಪ್ರತಿವರ್ಷ 4 ಲಕ್ಷ ಕೋಟಿ ತೆರಿಗೆ ಹಣ ಒಕ್ಕೂಟ ಸರಕಾರಕ್ಕೆ ಹೋಗುತ್ತಿದೆ. ಆದರೆ ಜಿಎಸ್‌ಟಿ ಪಾಲಿನಲ್ಲಿ ಕರ್ನಾಟಕಕ್ಕೆ ನ್ಯಾಯ ಒದಗಿಸುತಿಲ್ಲ. ಒಕ್ಕೂಟ ಸರಕಾರವು ಬ್ಯಾಂಕುಗಳು, ರೈಲು ಮತ್ತು ಅಂಚೆ ಇಲಾಖೆಗಳ ಮೂಲಕ ಹಿಂದಿ ಹೇರಿಕೆಯನ್ನು ಮುಂದುವರಿಸುತ್ತಿವೆ. ಜೊತೆಗೆ ಅನಿಯಂತ್ರಿತ ವಲಸೆಯಿಂದ ನಾಡಿನ ರಾಜಕೀಯ ಹಾಗೂ ಭೌಗೋಳಿಕ ಪರಿಸರದ ಮೇಲೆ ದುಷ್ಪರಿಣಾಮ ಅನುಭವಿಸುತ್ತಿದೆ ಎಂದು ಹೇಳಿದರು.

Advertisements

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಕುರಿತಾಗಿ ನಿರ್ಣಯ ಕೈಗೊಳ್ಳುಬೇಕು. ರಾಜ್ಯ ಪಠ್ಯಕ್ರಮದಲ್ಲಿ ಹಿಂದಿ ಪಾಠಗಳನ್ನು ಕೈಬಿಡಬೇಕೆಂಬ ನಿರ್ಣಯವನ್ನು ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದಲ್ಲಿ ಜಾರಿಗೊಳಿಸಬೇಕಾಗಿದೆ ಎಂದು ಒತ್ತಾಯಿಸಿದರು.

ಹಿಂದಿ ಹೇರಿಕೆ ವಿರೋಧಿಸಿ ಹೋರಾಟವನ್ನು ಕೈಗೊಳ್ಳಲು ಬೃಹತ್ ಪ್ರಚಾರದ ಯೋಜನೆಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಒಂದು ಲಕ್ಷ ಕರಪತ್ರ, ಪೋಸ್ಟರ್, ಟೀ ಶರ್ಟ್ ಮುದ್ರಿಸಿ ಹಂಚುವುದು, ಕಾಲೇಜುಗಳಲ್ಲಿ ಜಾಗೃತಿ ಕಾರ್ಯಾಗಾರಗಳನ್ನು ಆಯೋಜಿಸುವುದು ಮತ್ತು ವಿದ್ಯಾರ್ಥಿಗಳ ಬೈಕ್ ರ್‍ಯಾಲಿಗಳನ್ನು ಹಮ್ಮಿಕೊಳ್ಳುವುದು ಎಂದು ತೀರ್ಮಾನಿಸಲಾಯಿತು.

ರಾಜ್ಯ ಶಿಕ್ಷಣದಲ್ಲಿ ಹಿಂದಿ ಹೇರಿಕೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಕನ್ನಡಪರ ಸಂಘಟನೆಗಳು ಈ ಹೋರಾಟಕ್ಕೆ ಮತ್ತಷ್ಟು ಬಲ ನೀಡಲು ತೀರ್ಮಾನಿಸಿದ್ದವು. ಹಿಂದಿ ಭಾಷಾ ಹೇರಿಕೆಯನ್ನು ವಿರೋಧಿಸಲು ಮತ್ತು ಕನ್ನಡಕ್ಕೆ ಆದ್ಯತೆ ನೀಡಲು ಬೃಹತ್ ಪ್ರಚಾರ ಅಭಿಯಾನಗಳು ಮುಂದಿನ ದಿನಗಳಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಶ್ರೀರಂಗಪಟ್ಟಣ | ಸಮಾನತೆಗಾಗಿ ಅಂಬೇಡ್ಕರ್ ದಾರಿಯಲ್ಲಿ ಹೋರಾಟ ನಡೆಸಬೇಕು : ಶಾಸಕ ದರ್ಶನ್ ಪುಟ್ಟಣ್ಣಯ್ಯ

ಸಭೆಯಲ್ಲಿ ರಾಜ್‌ಕುಮಾರ್ ಅಭಿಮಾನಿ ಸಂಘದ ಶೇ.ಬೋ. ರಾಧಕೃಷ್ಣ, ಜೈ ಕರ್ನಾಟಕ ಪರಿಷತ್‌ನ ಅಧ್ಯಕ್ಷ ಎಸ್. ನಾರಾಯಣ್, ದ್ರಾವಿಡ ಕನ್ನಡಿಗರು ಸಂಘಟನೆಯ ಅಭಿಗೌಡ, ವಕೀಲ ಲಕ್ಷ್ಮಣ್ ಚೀರನಹಳ್ಳಿ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಎಚ್.ಡಿ. ಜಯರಾಂ ಮತ್ತು ಹಲವು ಕನ್ನಡಪರ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X