ರಾಯಚೂರು ನಗರದ ಸಂತೋಷ್ ನಗರದಲ್ಲಿ ಸರ್ಕಾರಿ ಶಾಲೆಯ ಜಾಗದಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸಲಾಗಿದೆ. ಜಿಲ್ಲೆಯಲ್ಲಿರುವ ಸರ್ಕಾರಿ ಜಾಗ ಒತ್ತುವರಿ ಮಾಡಿದ್ದನ್ನು ಹಂತ ಹಂತವಾಗಿ ತೆರವುಗೊಳಿಸಲಾಗುವುದು ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ತಿಳಿಸಿದರು.
ಬುಧವಾರ ಸಂಜೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಂತೋಷ್ ನಗರದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಸರ್ಕಾರಿ ಪ್ರೌಢ ಶಾಲಾ ನಿರ್ಮಾಣಕ್ಕೆ ಕಾಯ್ದಿರಿಸಿದ ಜಾಗವನ್ನು ಕಬಳಿಸಿ ಅಕ್ರಮ ಶೆಡ್ ನಿರ್ಮಿಸಿಕೊಂಡು ಎರಡು ಮೂರ್ತಿಗಳನ್ನು ಇಟ್ಟು ದೇವಸ್ಥಾನದ ರೂಪ ನೀಡಿದ್ದರು. ಅದನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ತೆರವುಗೊಳಿಸಿದ್ದೇವೆ” ಎಂದು ತಿಳಿಸಿದರು.
ವಿವಿಧ ಸಂಘಟನೆಗಳ ಮುಖಂಡರು ದೂರು ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿಯಿಂದ ತೆರವು ಕಾರ್ಯಾಚರಣೆ ಮಾಡಲಾಗಿದೆ. ಸರ್ಕಾರಿ ಶಾಲೆ ನಿರ್ಮಾಣಕ್ಕೆ ರೂಪಾಯಿ ಒಂದು ಕೋಟಿ ಕೆಕೆಆರ್‌ಡಿಬಿ ಅನುದಾನ ಬಿಡುಗಡೆಯಾಗಿದ್ದು, ಶಾಲೆ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಇದನ್ನು ಓದಿದ್ದೀರಾ? ವಿಕ್ರಂ ಗೌಡರದ್ದು ನಕಲಿ ಎನ್‌ಕೌಂಟರ್ ಅಲ್ಲ, ಮಷೀನ್ ಗನ್ ಇದ್ದಿದ್ದಕ್ಕೆ ಹತ್ಯೆ: ಆಂತರಿಕ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ
ನಗರದಲ್ಲಿ ಸರ್ಕಾರಿ ಜಾಗದಲ್ಲಿ ಮನೆಗಳು ನಿರ್ಮಾಣವಾಗಿವೆ .ಲೇಔಟ್ ಅನುಮತಿ ನೀಡಲಾಗಿದೆ. ಇಂತಹ ಪ್ರಕರಣ ಕಾನೂನಾತ್ಮಕ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ ತಿಳಿಸಿದ್ದಾರೆ.
