ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಶಹಾಪುರ ತಾಲ್ಲೂಕಿನಲ್ಲಿ ನಡೆದಿದೆ.
ಶಹಾಪುರ ತಾಲೂಕಿನ ಗೋಗಿ(ಕೆ) ಗ್ರಾಮದ ಸಂತೋಷ್ ಶರಣಪ್ಪ (19) ಆರೋಪಿ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ನ.18 ರಂದು ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಂತೋಷ್ ಬಾಲಕಿಯ ಮನೆಗೆ ನುಗ್ಗಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಯಾಕಿಲ್ಲ?
ಈ ಕುರಿತು ಗೋಗಿ(ಕೆ) ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.