ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ನಿಧ‌ನ

Date:

Advertisements

ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ.

ಹಾನಗಲ್ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಧ್ಯರಾತ್ರಿ ಮೃತಪಟ್ಟಿದ್ದಾರೆ.

2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾ‌ರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗಲಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆದು ಜೆಡಿಎಸ್‌ ಸೇರ್ಪಡೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

Advertisements

ಗುರುವಾರ ಮಧ್ಯಾಹ್ನ ಹಾನಗಲ್‌ ಎನ್‌ಸಿಸಿ ಮಹಾವಿದ್ಯಾಲಯ ಆವರಣದಲ್ಲಿ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತದೆ. ಆ ಬಳಿಕ ಅವರ ಹುಟ್ಟೂರಾದ ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.

ಮನೋಹರ್ ತಹಶೀಲ್ದಾರ್ ನಿಧನಕ್ಕೆ ವಿಜಯೇಂದ್ರ ಸಂತಾಪ

ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಮನೋಹರ್ ತಹಶೀಲ್ದಾರ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X