ಭಾರತದ ಖ್ಯಾತ ಉದ್ಯಮಿ ಮತ್ತು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ಹೂಡಿಕೆದಾರರಿಗೆ ವಂಚಿಸಿದ ಮತ್ತು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಕೇಳಿಬಂದಿದೆ.
ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ ಎಂದು ವರದಿಯಾಗಿದೆ.
ಸೋಲಾರ್ ಒಪ್ಪಂದಗಳಿಗೆ ಶತಕೋಟಿ ಡಾಲರ್‌ಗಳನ್ನು ಲಂಚವಾಗಿ ಪಾವತಿಸಿದ ಮತ್ತು ಅಂತರರಾಷ್ಟ್ರೀಯ ಹೂಡಿಕೆದಾರರನ್ನು ದಾರಿ ತಪ್ಪಿಸಿದ ಆರೋಪದ ಮೇಲೆ ನ್ಯೂಯಾರ್ಕ್ ಫೆಡರಲ್ ಕೋರ್ಟ್ ಗೌತಮ್ ಅದಾನಿಯನ್ನು ದೋಷಿ ಎಂದು ತೀರ್ಪು ನೀಡಿದೆ.
ಲಂಚ ಮತ್ತು ವಂಚನೆ ಆರೋಪ ಹೊತ್ತಿರುವವರಲ್ಲಿ ಗ್ರೂಪ್ ನೊಂದಿಗೆ ಸಂಬಂಧ ಹೊಂದಿರುವ ಇತರ ಏಳು ಜನರು ಕೂಡಾ ಸೇರಿದ್ದಾರೆ. ಆರೋಪದ ಹಿನ್ನೆಲೆಯಲ್ಲಿ ಅದಾನಿ ಎಂಟರ್‌ಪ್ರೈಸಸ್ ಬಾಂಡ್‌ಗಳ ಮೂಲಕ 600 ಮಿಲಿಯನ್ ಡಾಲರ್ ಸಂಗ್ರಹಿಸುವ ಯೋಜನೆಯನ್ನು ರದ್ದುಗೊಳಿಸಿದೆ.